ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ವೀಕ್ಷಕರ ಪಾತ್ರ ಮಹತ್ತರ: ಉದಯ ನಾಯಕ್

ಉಡುಪಿ, ಡಿ.17: ಗಸ್ತು ಅರಣ್ಯ ಪಾಲಕರು, ಅರಣ್ಯ ವೀಕ್ಷಕರು, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಮುಂದಿನ ಪೀಳಿಗೆ ಉತ್ತಮ ಅರಣ್ಯ, ವನ್ಯಜೀವಿ ಸಂಪತ್ತು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿ ಯಾಗಿದೆ ಎಂದು ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಎಂ.ನಾಯಕ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘದ ವತಿಯಿಂದ ರವಿವಾರ ಉಡುಪಿ ಕಿದಿಯೂರು ಹೊಟೇಲಿನ ಶೇಷಶಯನ ಹಾಲ್‌ನಲ್ಲಿ ಆಯೋಜಿಸಲಾದ ಹೊಸ ವರ್ಷದ ಡೈರಿ ಬಿಡುಗಡೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಸಂಘದ ಹೊಸ ಡೈರಿ ಬಿಡುಗಡೆಗೊಳಿಸಿದರು. ಸ್ವಾ ಮಿಲ್ ಸಂಘದ ಅಧ್ಯಕ್ಷ ವಿನಯ ಬಲ್ಲಾಳ್, ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ನಾಗೇಶ್ ಬಿಲ್ಲವ, ಎನ್‌ಪಿಎಸ್ ಸಂಘಟನೆಯ ಅಧ್ಯಕ್ಷ ರಾಘವ ಶೆಟ್ಟಿ, ಬೈಂದೂರು ಆರ್‌ಎಫ್‌ಓ ಶೃಂಗೇಶ್ ಕುಮಾರ್, ಕೆಸಿಡಿಸಿ ವಲಯ ಅರಣ್ಯಾಧಿಕಾರಿ ಗಣಪತಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಗಸ್ತು ಅರಣ್ಯ ಪಾಲಕರಾದ ಪ್ರಭಾತ್ ಕುಮಾರ್, ಗಣಪತಿ ನಾಯಕ್, ಸಮಾಜ ಸೇವಕರಾದ ವಿನೇಶ್ ಪೂಜಾರಿ, ಕೆ.ಗಂಗಾಧರ ರಾವ್ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೇಶವ ಪೂಜಾರಿ ಎಂ. ವಹಿಸಿದ್ದರು.
ಸಂಘದ ಗೌರವಾಧ್ಯಕ್ಷ ದೇವರಾಜ ಪಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ರವಿ ಸ್ವಾಗತಿಸಿ ದರು. ಖಜಾಂಚಿ ಸಂತೋಷ್ ಜೋಗಿ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.







