ಕಾರು ಢಿಕ್ಕಿ: ಪಾದಚಾರಿ ಮೃತ್ಯು

ಬೈಂದೂರು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಾವುಂದ ಮಸ್ಕಿ ಅಂಚೆ ಕಚೇರಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.18ರಂದು ಬೆಳಗ್ಗೆ 10.45ರ ಸುಮಾರಿಗೆ ನಡೆದಿದೆ.
ಮೃತರನ್ನು ಗೋವಿಂದ(70) ಎಂದು ಗುರುತಿಸಲಾಗಿದೆ. ಅರೆಹೊಳೆ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ರಸ್ತೆ ಬದಿ ನಿಂತಿದ್ದ ಗೋವಿಂದರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





