ಮಣಿಪಾಲ ಪಿಎಚ್‌ಸಿಗೆ ರೇಜು ಭೇಟಿ

ಉಡುಪಿ, ಡಿ.21: ರಾಜ್ಯ ಹಣಕಾಸು ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಅವರು ಇಂದು ಮಣಿಪಾಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Next Story





