ನೇಜಾರಿನಲ್ಲಿ ನಾಲ್ವರ ಕಗ್ಗೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರಿಂದ ಆಕ್ಷೇಪಣೆ

ಪ್ರವೀಣ್ ಚೌಗುಲೆ
ಉಡುಪಿ, ಡಿ.21: ನೇಜಾರಿನಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ಇಂದು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ.
ಜಾಮೀನು ಅರ್ಜಿ ಕುರಿತು ವಾದ ಮಂಡಿಸಲು ಆರೋಪಿ ಪರ ವಕೀಲ ಕೆ.ಎಸ್.ಎನ್.ರಾಜೇಶ್ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಮನವಿ ಮಾಡಿದರು. ಅದರಂತೆ ನ್ಯಾಯಾಧೀಶ ದಿನೇಶ್ ಹೆಗ್ಡೆ ಡಿ.29ಕ್ಕೆ ವಾದ ಮಂಡಿಸಲು ದಿನಾಂಕ ನಿಗದಿಪಡಿಸಿದರು. ಇದೇ ದಿನ ಸರಕಾರಿ ಅಭಿಯೋಜಕರು ಕೂಡ ಪ್ರತಿವಾದ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story





