ಉಡುಪಿ ಕೃಷ್ಣಮಠಕ್ಕೆ ಚಿತ್ರನಟಿ ಸಾಯಿ ಪಲ್ಲವಿ ಭೇಟಿ

ಉಡುಪಿ, ಡಿ.22: ದಕ್ಷಿಣ ಭಾರತದ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಶುಕ್ರವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಮಲ್ಪೆಯಲ್ಲಿ ನಡೆಯುತ್ತಿರುವ ಚಲನಚಿತ್ರ ಶೂಟಿಂಗ್ ಹಿನ್ನೆಲೆಯಲ್ಲಿ ಉಡುಪಿಗೆ ಆಗಮಿಸಿರುವ ಇವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು. ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಸಾಯಿ ಪಲ್ಲವಿ ಅವರನ್ನು ಸ್ವಾಮೀಜಿ ಕೃಷ್ಣ ಮಠದ ವತಿಯಿಂದ ಗೌರವಿಸಿದರು.
Next Story





