ಇಸ್ಪೀಟು ಜುಗಾರಿ: ಐವರ ಬಂಧನ

ಗಂಗೊಳ್ಳಿ, ಡಿ.22: ಗಂಗೊಳ್ಳಿ ಗ್ರಾಮದ ದಾಕುಹಿತ್ಲುವಿನ ಬಳಿ ಡಿ.21ರಂದು ಇಸ್ಪೀಟು ಜುಗಾರಿ ಆಡುತ್ತಿದ್ದ ಐವರನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮಿಥುನ್, ರವಿ, ವಿಕ್ರಂ, ಗಣಪತಿ, ಅಣ್ಣಪ್ಪಬಂಧಿತ ಆರೋಪಿಗಳು. ದಾಳಿ ವೇಳೆ ವಿಜೇತ ಎಂಬಾತ ಪರಾರಿಯಾಗಿದ್ದಾನೆ. ಬಂಧಿತರಿಂದ 2,850ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





