Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭರತನಾಟ್ಯ ನೆಲದ ಸಾಂಸ್ಕೃತಿಕ ಶ್ರೀಮಂತಿಕೆ...

ಭರತನಾಟ್ಯ ನೆಲದ ಸಾಂಸ್ಕೃತಿಕ ಶ್ರೀಮಂತಿಕೆ ಬಿಂಬಿಸುವ ಕಲೆ: ಡಾ.ವಿಜಯ ಬಲ್ಲಾಳ್

ಕರಾವಳಿ ಭರತನಾಟ್ಯ ಕಲಾವಿದರ ನೃತ್ಯ ಸಮ್ಮೇಳನ ‘ನೃತ್ಯೋತ್ಕರ್ಷ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Dec 2023 6:47 PM IST
share
ಭರತನಾಟ್ಯ ನೆಲದ ಸಾಂಸ್ಕೃತಿಕ ಶ್ರೀಮಂತಿಕೆ ಬಿಂಬಿಸುವ ಕಲೆ: ಡಾ.ವಿಜಯ ಬಲ್ಲಾಳ್

ಉಡುಪಿ, ಡಿ.24: ಭರತನಾಟ್ಯ ಈ ನೆಲದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಬಿಂಬಿಸುವ ವಿಶಿಷ್ಟ ಕಲೆಯಾಗಿದೆ. ನಾಟ್ಯ ಮತ್ತು ಸಂಗೀತದ ಸೇವೆಯಿಂದ ದೇವರು ಸಂತುಷ್ಟರಾಗುತ್ತಾರೆ ಎಂದು ಅಂಬಲಪಾಡಿ ಶ್ರೀಜನಾರ್ದನ ಮಹಾ ಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಹೇಳಿದ್ದಾರೆ.

ಅಂಬಲಪಾಡಿ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಕರ್ನಾಟಕ ಕರಾವಳಿ ನೃತ್ಯ ಪರಿಷತ್, ಕರಾವಳಿ ನೃತ್ಯ ಕಲಾವಿದರ ನೃತ್ಯ ಸಮ್ಮೇಳನ ಸಮಿತಿ ಸಹಯೋಗದೊಂದಿಗೆ ಅಂಬಲಪಾಡಿ ದೇವಳದ ಆವರಣದಲ್ಲಿ ರವಿವಾರ ಆಯೋಜಿಸಲಾದ ಕರಾವಳಿ ಭರತನಾಟ್ಯ ಕಲಾವಿದರ ನೃತ್ಯ ಸಮ್ಮೇಳನ ‘ನೃತ್ಯೋತ್ಕರ್ಷ’ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಭರತನಾಟ್ಯ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಪ್ರಯತ್ನವಾಗಿದ್ದು, ಜನರ ಮಾನಸಿಕ ಒತ್ತಡ ನಿವಾರಣೆಗೆ ನೆಮ್ಮದಿ ಲಭಿಸಲು ಭರತನಾಟ್ಯ ಶಾಸ್ತ್ರ ಕಲೆ ಉಪಯುಕ್ತವಾಗಿದೆ. ಇದರಿಂದ ಜ್ಞಾನವು ವೃದ್ಧಿಯಾಗುತ್ತದೆ ಎಂದರು.

ಸಮ್ಮೇಳನಾಧ್ಯಕ್ಷ, ನಾಟ್ಯಾಚಾರ್ಯ ಪ್ರೊ.ಕೆ.ರಾಮಮೂರ್ತಿ ರಾವ್ ಮಾತನಾಡಿ, ವರ್ಷದಿಂದ ವರ್ಷಕ್ಕೆ ಭರತನಾಟ್ಯ ಕಲೆಯುತ್ತ ಆಕರ್ಷಿತರಾಗು ವರ ಸಂಖ್ಯೆ ಹೆಚ್ಚುತ್ತಿದೆ. ಭರತನಾಟ್ಯದ ಎಲ್ಲ ಕಲಾವಿದರು ಭರತಮುನಿಯ ಅನುಯಾಯಿ ಗಳಾಗಿದ್ದಾರೆ. ಭರತನಾಟ್ಯ ಕ್ಲಾಸ್‌ನಿಂದ ಮಾಸ್‌ನತ್ತ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

ಕಸಾಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಸಮ್ಮೇಳನ ಸಮಿತಿ ಅಧ್ಯಕ್ಷ ಕಮಲಾಕ್ಷ ಆಚಾರ್, ಕಾರ್ಯಾಧ್ಯಕ್ಷ ಯು.ಕೆ.ಪ್ರವೀಣ್, ಪರಿಷತ್ತಿನ ಪ್ರಮುಖರಾದ ನಯನಾ ರೈ, ಸುರೇಶ್ ಅತ್ತಾವರ, ರಾಜಶ್ರೀ ಉಲ್ಲಾಳ, ಶಾರಧಾ ಮಣಿ ಶೇಖರ್, ಶ್ರೀಧರ್ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.

ಸುಮಂಗಲಾ ರತ್ನಾಕರ ರಾವ್ ನಿರೂಪಿಸಿದರು. ಬಳಿಕ ಭರತನಾಟ್ಯ ವಿಚಾರ ಗೋಷ್ಠಿ, ಸಂವಾದ ನಡೆಯಿತು. ಸಮ್ಮೇಳನದಲ್ಲಿ 250ಕ್ಕೂ ಅಧಿಕ ನೃತ್ಯ ಗುರು ಗಳು, 750ಕ್ಕೂ ಅಧಿಕ ನೃತ್ಯ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X