Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರಿಸರ ಉಳಿಯಲು ಸಾಮಾಜಿಕ ಕಾಳಜಿ ಅತೀ...

ಪರಿಸರ ಉಳಿಯಲು ಸಾಮಾಜಿಕ ಕಾಳಜಿ ಅತೀ ಮುಖ್ಯ: ಪಿ.ಶ್ರೀಧರ್

ವಾರ್ತಾಭಾರತಿವಾರ್ತಾಭಾರತಿ24 Dec 2023 6:49 PM IST
share
ಪರಿಸರ ಉಳಿಯಲು ಸಾಮಾಜಿಕ ಕಾಳಜಿ ಅತೀ ಮುಖ್ಯ: ಪಿ.ಶ್ರೀಧರ್

ಕುಂದಾಪುರ, ಡಿ.24: ಪರಿಸರ ಉಳಿಯಬೇಕಾದರೆ ನಮ್ಮಲ್ಲಿ ಸಾಮಾಜಿಕ ಪರಿಸರದ ಕಾಳಜಿ ಅತೀ ಮುಖ್ಯ. ಸಕಲ ಜೀವ ರಾಶಿಗಳಿಗೂ ಪರಿಸರ ಬೇಕಾಗಿದೆ. ಆದರೆ ನಮ್ಮ ಸ್ವಾರ್ಥಕ್ಕೆ ಪರಿಸರ ನಾಶ ಆಗುತ್ತಿದೆ ಎಂದು ಮಂಗಳೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶ್ರೀಧರ್ ಹೇಳಿದ್ದಾರೆ.

ಮಾಜಿ ಶಾಸಕ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಅವರ 89ನೇ ಜನುಮ ದಿನದ ಪ್ರಯುಕ್ತ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ 89 ವಿವಿಧ ಜಾತಿಯ ಗಿಡಗಳನ್ನು ನೆಟ್ಟಿರುವ ’ಅಮೃತ ವನ’ವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕೆಲವೊಂದು ಗಿಡ-ಮರಗಳು ಅಳಿವಿನಂಚಿನಲ್ಲಿವೆ. ಪ್ರತಿಯೊಂದು ಗಿಡ- ಮರಗಳಿಗೂ ತನ್ನದೇ ವೈಶಿಷ್ಟ್ಯವಿದೆ. ಅವುಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದು. ಪರಿಸರವನ್ನು ನಾವು ಪ್ರೀತಿಸಿದರೆ ಅದು ನಮ್ಮನ್ನು ಖಂಡಿತ ಕಾಪಾಡುತ್ತದೆ ಎಂದು ಅವರು ತಿಳಿಸಿದರು.

ಬಿ.ಅಪ್ಪಣ್ಣ ಹೆಗ್ಡೆ ಮಾತನಾಡಿ, ಗಿಡ- ಮರಗಳನ್ನು ಉಳಿಸಿ, ಬೆಳೆಸುವುದಕ್ಕೆ ನಾವರೆಲ್ಲರೂ ಪ್ರಥಮ ಪ್ರಾಶಸ್ತಯ ಕೊಡಬೇ ಕಾಗಿದೆ. ನೆಟ್ಟ ಗಿಡಗಳನ್ನು ಉಳಿಸುವುದು ಕರ್ತವ್ಯ. ನೆಟ್ಟ ಗಿಡಗಳನ್ನು ಉಳಿಸದೇ ಇರುವುದು ರಾಷ್ಟ್ರೀಯ ನಷ್ಟ. ನಾವು ಅಭಿವೃದ್ಧಿ ಹೆಸರಲ್ಲಿ ಕಾಡಿನ ಸಂಪತ್ತನ್ನು ನಾಶ ಮಾಡುತ್ತಿರುವುದ ರಿಂದ ಕಾಡು ಪ್ರಾಣಿಗಳು ನಾಡಿಗೆ ಬರುವಂತಾಗಿದೆ. ಅದನ್ನು ಮತ್ತೆ ಸರಿಪಡಿಸ ಬೇಕಾದರೆ ಇಂತಹ ಕಾರ್ಯ ಮಾಡಬೇಕಾಗಿದೆ ಮಕ್ಕಳಲ್ಲಿ ಪರಿಸರ ಪ್ರೀತಿಯನ್ನು ಬೆಳೆಸಬೇಕಾ ಗಿದೆ. ಇದರಿಂದ ಎಲ್ಲ ಹಾವಳಿಗಳು ಕಡಿಮೆಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಾಂಡ್ಯ ಎಜ್ಯುಕೇಶನಲ್ ಟ್ರಸ್ಟ್‌ನ ಜಂಟಿ ಕಾರ್ಯನಿರ್ವಾ ಹಕರಾದ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ಅನುಪಮಾ ಎಸ್. ಶೆಟ್ಟಿ, ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ರಾಮರತನ್ ಹೆಗ್ಡೆ, ರಾಮಕಿಶನ್ ಹೆಗ್ಡೆ, ಪ್ರೀತಮ್ ಎಸ್.ರೈ, ಗುರುಕುಲ ಪಬ್ಲಿಕ್ ಸ್ಕೂಲ್ ವಿಶ್ವಸ್ಥ ಮಂಡಳಿ ಸದಸ್ಯ ರಾಜೇಶ್ ಕೆ.ಸಿ, ಪ್ರಾಂಶುಪಾಲ ಮೋಹನ್ ಕೆ., ಹವ್ಯಾಸಿ ಸಸ್ಯ ಸಂರಕ್ಷಕ ಮಾಧವ ಉಳ್ಳಾಲ್, ಸಂಸ್ಥೆಯ ಶಿಕ್ಷಕರು, ಅಪ್ಪಣ್ಣ ಹೆಗ್ಡೆ ಕುಟುಂಬಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X