ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

ಉಡುಪಿ, ಡಿ.28: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಜನವರಿ 12, ದತ್ತಾಂಶಗಳನ್ನು ಸಂಗ್ರಹಿಸಿ ಪರಿಶೀಲಿಸುವ ದಿನಾಂಕ ಜ.17 ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಜ.22ರಂದು ಪ್ರಕಟಿಸುವಂತೆ ಪರಿಷ್ಕೃತ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





