Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುವೆಂಪು ಸಾಹಿತ್ಯ ಪರಿಕಲ್ಪನೆ,...

ಕುವೆಂಪು ಸಾಹಿತ್ಯ ಪರಿಕಲ್ಪನೆ, ವಿಶ್ವಮಾನವ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಮಮತಾದೇವಿ

ವಾರ್ತಾಭಾರತಿವಾರ್ತಾಭಾರತಿ29 Dec 2023 7:44 PM IST
share
ಕುವೆಂಪು ಸಾಹಿತ್ಯ ಪರಿಕಲ್ಪನೆ, ವಿಶ್ವಮಾನವ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಮಮತಾದೇವಿ

ಉಡುಪಿ: ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದ್ದಾರೆ.

ಶುಕ್ರವಾರ ಉಡುಪಿಯ ಸರಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕುವೆಂಪು ಒಬ್ಬ ಶ್ರೇಷ್ಠ ಕವಿ. ಅವರು ತಮ್ಮ ಆಲೋಚನೆಗಳನ್ನು ಸಾಹಿತ್ಯ ಹಾಗೂ ಕೃತಿಗಳ ಮೂಲಕ ಸಮಾಜಕ್ಕೆ ನೀಡಿದ್ದು, ಅವರ ಈ ಬರಹಗಳು ಹಲವಾರು ಸಾಮಾಜಿಕ ಸುಧಾರಣೆ ತಂದಿದೆ. ದುಂದುವೆಚ್ಚ ಮಾಡದೇ ಮದುವೆ ನಡೆ ಸುವ ಸಲುವಾಗಿ ಪ್ರಪಂಚಕ್ಕೆ ಮಂತ್ರಮಾಂಗಲ್ಯವನ್ನು ಅವರು ಪರಿಚಯಿಸಿದ್ದಾರೆ. ಕುವೆಂಪು ರಚಿಸಿದ ನಾಡಗೀತೆಯನ್ನು ದಿನನಿತ್ಯ ಹಾಡುವ ಮೂಲಕ ಪ್ರತಿದಿನ ಅವರನ್ನು ನಾವು ನೆನೆಯುತ್ತಿದ್ದೇವೆ. ಸಾಹಿತ್ಯ ಲೋಕದಲ್ಲಿ ಪ್ರಥಮ ಬಾರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ಕರುನಾಡಿಗೆ ತಂದುಕೊಟ್ಟ ಶ್ರೇಷ್ಠ ಕವಿ ಕುವೆಂಪು ಎಂದರು.

ಮಾನವನನ್ನು ವಿಶ್ವ ಮಾನವ ಮಾಡಬೇಕೆನ್ನುವುದು ಕುವೆಂಪು ಕನಸಾಗಿದ್ದು, ಪ್ರತಿಯೊಬ್ಬರಲ್ಲೂ ಇರುವ ವ್ಯಕ್ತಿ ಸ್ವಾತಂತ್ರ್ಯ ವನ್ನು ಗೌರವಿಸಬೇಕು ಎನ್ನುವುದು ಇದರ ನಿಯಮ. ಆದ್ದರಿಂದ ಅವರು ಹುಟ್ಟಿದ ದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಪ್ರಜ್ಞಾ ಮಾರ್ಪಳ್ಳಿ ಕುವೆಂಪು ಅವರ ಕುರಿತು ಉಪನ್ಯಾಸ ನೀಡಿ, ಕುವೆಂಪು ಸಾಹಿತ್ಯ ದಲ್ಲಿರುವ ಬರಹಗಳಲ್ಲಿ ಸಾಮರ್ಥ್ಯವನ್ನು ಅರಿತು ಪರಿಪೂರ್ಣ ಬದುಕನ್ನು ಕಟ್ಟಿಕೊಂಡಾಗ ಕುವೆಂಪು ಅವರ ವಿಶ್ವಮಾನವ ಕನಸು ಈಡೇರುತ್ತದೆ. ಮನುಷ್ಯ ಕರ್ತವ್ಯದೊಂದಿಗೆ ತನ್ನ ಜೀವನವನ್ನು ಹೇಗೆ ಆದರ್ಶವಾಗಿಟ್ಟು ಕೊಳ್ಳಬೇಕು ಎಂಬುದನ್ನು ಅವರ ಶ್ರೀರಾಮಾಯಣ ದರ್ಶನಂ ಕೃತಿಯಲ್ಲಿ ಕಾಣಬಹುದಾಗಿದೆ ಎಂದರು.

ವಿಶ್ವ ಮಾನವತೆ ಕಡೆಗೆ ಬದುಕಿನ ಪಥ ಸಾಗಬೇಕು. ನಮ್ಮ ಆಲೋಚನೆಗಳು ಪೂರ್ಣಪ್ರಮಾಣದಲ್ಲಿ ತಂತ್ರಜ್ಞಾನಕ್ಕೆ ತಲೆಬಾಗಬಾರದು. ತ್ಯಾಗ, ಪ್ರೀತಿ, ಕರುಣೆ, ಸ್ಪಂದಿಸುವಿಕೆಯ ಮನೋಭಾವವನ್ನು ಬೆಳೆಸಿಕೊಂಡಾಗ ವ್ಯಕ್ತಿ ಮಾನವನಾ ಗುತ್ತಾನೆ. ವರ್ಣರಹಿತ, ವರ್ಗರಹಿತ, ಜಾತಿ ಮೀರಿದ ಸಮಾಜ ನಿರ್ಮಾಣ ಮಾಡಬೇಕೆನ್ನುವುದು ಕುವೆಂಪು ಅವರ ಕನಸಾಗಿದ್ದು, ಅದನ್ನು ಈಡೇರಿಸುವಲ್ಲಿ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದರು.

ಈ ಸಂದರ್ಭದಲ್ಲಿ ಕುವೆಂಪು ಅವರ ಭಾವಗೀತೆ ಹಾಗೂ ಅವರ ಕುರಿತು ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಹಾವಂಜೆ ವಿನಯ ಬಾಬುರಾಜ್ ಮತ್ತು ತಂಡದವರಿಂದ ಹಾಗೂ ದಿನೇಶ್ ಹಾವಂಜೆ ಅವರಿಂದ ಗೀತಗಾಯನ ಮತ್ತು ಜಾಹ್ನವಿ ಇವರಿಂದ ಕೊಳಲು ವಾದನ ನಡೆಯಿತು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಯದರ್ಶಿ ನರಸಿಂಹಮೂರ್ತಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಸುಮಾ, ಶಾಲೆಯ ವಿದ್ಯಾರ್ಥಿನಿಯರು ಹಾಗೂ ಇತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಶಿಕ್ಷಕ ರಾಮಚಂದ್ರ ಭಟ್ ನಿರೂಪಿಸಿದರೆ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ ಬಿ. ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X