Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಖಾಸಗಿ ವಾಹನಗಳಲ್ಲಿ ಬಾಡಿಗೆ ಆಧಾರದಲ್ಲಿ...

ಖಾಸಗಿ ವಾಹನಗಳಲ್ಲಿ ಬಾಡಿಗೆ ಆಧಾರದಲ್ಲಿ ಸಾರ್ವಜನಿಕರನ್ನು ಸಾಗಾಣಿಕೆ ಮಾಡಿದಲ್ಲಿ ಕ್ರಮ: ಉಡುಪಿ ಡಿಸಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ30 Dec 2023 10:24 PM IST
share
ಖಾಸಗಿ ವಾಹನಗಳಲ್ಲಿ ಬಾಡಿಗೆ ಆಧಾರದಲ್ಲಿ ಸಾರ್ವಜನಿಕರನ್ನು ಸಾಗಾಣಿಕೆ ಮಾಡಿದಲ್ಲಿ ಕ್ರಮ: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳಲ್ಲಿ ಬಾಡಿಗೆ ಆಧಾರದ ಮೇಲೆ ಸಾರ್ವಜನಿಕರನ್ನು ಸಾಗಾಣಿಕೆ ಮಾಡು ವುದು ಕಂಡು ಬಂದಲ್ಲಿ ಅರ್. ಟಿ. ಓ ಹಾಗೂ ಪೊಲೀಸ್ ಇಲಾಖೆಗಳು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ತಿಳಿಸಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕ/ಮಾಲಕರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳಿಂದ ಸಾರ್ವಜನಿಕರ ಸಾಗಾಣಿಕೆಯ ಖಾಸಗಿ ವಾಹನಗಳಲ್ಲಿ ಬಾಡಿಗೆ ಪಡೆದು ಸಂಚರಿಸುತ್ತ ಇರುವುದು ಹೆಚ್ಚು ಕಂಡು ಬರುತ್ತಿದೆ. ಇದರಿಂದ ಸರಕಾರಕ್ಕೆ ತ್ರೈಮಾಸಿಕ ತೆರಿಗೆ ವಂಚನೆ ಆಗುವುದರ ಜೊತೆಗೆ ಅದನ್ನೇ ನಂಬಿ ಟ್ಯಾಕ್ಸಿ ಚಾಲಕರಿಗೆ ಅನಾನುಕೂಲ ವಾಗುತ್ತಿರುವ ಹಿನ್ನೆಲೆ, ಅಂತಹ ವಾಹನಗಳಲ್ಲಿ ಚಾಲನೆ ಮಾಡುತ್ತಿರುವುದು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಮತ್ತು ಆರ್. ಟಿ..ಓ ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಆಟೋ ಚಾಲಕರು ರಹದಾರಿ ಪಡೆದ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಡಿಗೆಗೆ ವಾಹನವನ್ನು ಚಾಲನೆ ಮಾಡಬಹುದಾಗಿದ್ದು, ಇವರು ತಮ್ಮ ಕ್ಷೇತ್ರ ವ್ಯಾಪ್ತಿ ಬಿಟ್ಟು ಚಾಲನೆ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಆಟೋ ಚಾಲಕರು ಸಾರ್ವಜನಿಕರನ್ನು ಬಾಡಿಗೆ ಆಧಾರದಲ್ಲಿ ಕರೆದೊಯ್ಯುವಾಗ ತಪ್ಪದೇ ಮೀಟರ್ ಆಧಾರದ ಮೇಲೆ ಬಾಡಿಗೆಯನ್ನು ಪಡೆಯಬೇಕು. ಕನಿಷ್ಠ ದರ ಒಂದುವರೆ ಕಿಲೋಮೀಟರ್ ಗೆ 40 ರೂಪಾಯಿಗಳು ನಂತರದ ಒಂದು ಕಿಲೋಮೀಟರ್ ಗೆ 20 ರೂಪಾಯಿಗಳು ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ ಒಂದುವರೆ ಪಟ್ಟು ಶುಲ್ಕ ಪಡೆಯಬಹುದಾಗಿದೆ ಒಂದೊಮ್ಮೆ ಹೆಚ್ಚು ಶುಲ್ಕ ಪಡೆದರೆ ಕ್ರಮ ಕೈಗೊಳ್ಳಬೇಕೆಂದು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಶೋಧ ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ ಆಟೋ ಚಾಲಕರನ್ನು ಕಾರ್ಮಿಕರ ವ್ಯಾಪ್ತಿಗೆ ಸೇರಿಸಿ ಕಾರ್ಮಿಕ ಇಲಾಖೆಯಿಂದ ನೀಡುತ್ತಿರುವ ಸರಕಾರಿ ಸೌಲಭ್ಯಗಳನ್ನು ಒದಗಿಸಬೇಕು ಎಂದರು.

ನಗರಸಭಾ ವ್ಯಾಪ್ತಿಯ 35 ವಾರ್ಡ್ ಗಳ ವ್ಯಾಪ್ತಿಯಲ್ಲಿ ಬರುವ ಉಡುಪಿ ಸಾರಿಗೆ ಪ್ರಾಧಿಕಾರದ ನಿಯಮದನ್ವಯ ವಲಯ -1 ರ ಪರವಾನಿಗೆ ಹೊಂದಿದ ರಿಕ್ಷಾಗಳಿಗೆ ನಗರದಲ್ಲಿ ಸಂಚರಿಸುವ ಮತ್ತು ರಿಕ್ಷಾ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲು ಅವಕಾಶ ಒದಗಿಸಿಕೊಡಬೇಕು ಎಂದರು.

ಉಡುಪಿ ಜಿಲ್ಲಾ ಟ್ಯಾಕ್ಸಿ ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿ, ಖಾಸಗಿ ವಾಹನದ ಮಾಲೀಕರು ಅನಧಿಕೃತವಾಗಿ ಬಾಡಿಗೆಗೆ ತಮ್ಮ ವಾಹನಗಳನ್ನು ಕಲಿಸಿದ್ದಲ್ಲಿ, ಅಪಘಾತವಾದ ಸಂದರ್ಭದಲ್ಲಿ ಪರಿಹಾರ ಧನ ಹಣವನ್ನು ಪಡೆಯಲು ತೊಂದರೆ ಉಂಟಾಗುತ್ತಿದೆ. ನಿಜವಾಗಿಯೂ ಟ್ಯಾಕ್ಸಿ ಚಾಲನೆ ಮಾಡುತ್ತಿರುವ ವೃತ್ತಿ ಪರರಿಗೆ ಜೀವನ ನಿರ್ವಹಣೆಗೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಎಸ್ಪಿ ಡಾ. ಅರುಣ್ ಕೆ, ಎ ಎಸ್ಪಿ ಸಿದ್ಧಲಿಂಗಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪಿ. ರವಿಶಂಕರ್, ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್, , ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X