ಟ್ಯಾಂಕರ್ ಢಿಕ್ಕಿ: ಪಾದಚಾರಿ ಮೃತ್ಯು

ಕಾಪು, ಡಿ.31: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉದ್ಯಾವರ ಗ್ರಾಮದ ಭಗವತಿ ಹಾರ್ಡ್‌ವೇರ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.30ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಕೊರಂಗ್ರಪಾಡಿಯ ಜಯ(64) ಎಂದು ಗುರುತಿಸಲಾಗಿದೆ. ಪಿತ್ರೋಡಿಯ ಸುರೇಶ್ ಎಂಬವರೊಂದಿಗೆ ಹೊಲೋ ಬ್ಲಾಕ್ ಕೆಲಸ ಮಾಡಿ ಕೊಂಡಿದ್ದ ಇವರು, ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ಮಧ್ಯೆ ರಸ್ತೆ ದಾಟಲು ನಿಂತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಜಯ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





