ಬಿದಿರಿನ ಬುಟ್ಟಿ ತಯಾರಿಕಾ ತರಬೇತಿ ಶಿಬಿರದ ಉದ್ಘಾಟನೆ

ಕುಂದಾಪುರ: ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಉಡುಪಿ ಐ.ಟಿ.ಡಿ.ಪಿ. ಮತ್ತು ಉಡುಪಿ ಜಿಲ್ಲಾ ಕೊರಗ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ 30 ದಿನಗಳ ಕಾಲ ಬಿದಿರಿನ ಬುಟ್ಟಿ ತಯಾರಿಕಾ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ವನ್ನು ಪಡುಕೋಣೆಯಲ್ಲಿ ಆಯೋಜಿಸಲಾಗಿತ್ತು.
ಶಿಬಿರವನ್ನು ಉದ್ಘಾಟಿಸಿದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಸಮುದಾಯದ ಕುಲಕಸುಬನ್ನು ಮುಂದುವರೆಸಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆಯನ್ನು ನಾಡಾ ಗ್ರಾಪಂ ಅಧ್ಯಕ್ಷೆ ಪಾರ್ವತಿ ವಹಿಸಿದ್ದರು. ಗ್ರಾ.ಪಂ ಸದಸ್ಯರಾದ ರಾಜು ಪಡುಕೋಣೆ, ಅರವಿಂದ ಪೂಜಾರಿ, ಶೋಭಾ, ಮಮತ, ಮಾಜಿ ಸದಸ್ಯ ರಾಮ ಪೂಜಾರಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ., ಕೊರಗ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಗಣೇಶ್, ತರಬೇತುದಾರರಾದ ಬಾಬು ಮತ್ತು ದೀಪಾ ಉಪಸ್ಥಿತರಿದ್ದರು.
ಕೌಶಲ್ಯಾಭಿವೃದ್ಧಿ ಸಿಬ್ಬಂದಿ ನಾಗರಾಜ ಖಾರ್ವಿ ಸ್ವಾಗತಿಸಿದರು. ಸಂಧ್ಯಾರಾಣಿ ವಂದಿಸಿದರು. ರಾಮಕೃಷ್ಣ ನಿರೂಪಿಸಿದರು. 30 ದಿನಗಳ ತರಬೇತಿಯಲ್ಲಿ 30 ಶಿಬಿರಾರ್ಥಿಗಳಿಗೆ ಆಧುನಿಕ ಬುಟ್ಟಿ ನೇಯ್ಗೆಯ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.





