ಚಲಿಸುತ್ತಿದ್ದ ರಿಕ್ಷಾ ಚಾಲಕನಿಗೆ ಹೃದಯಾಘಾತ: ಪ್ರಯಾಣಿಕರಿಗೆ ಗಾಯ

ಉಡುಪಿ: ರಿಕ್ಷಾ ಚಾಲಕನಿಗೆ ಹೃದಯಾಘಾತ ಉಂಟಾದ ಪರಿಣಾಮ ಚಲಿಸುತ್ತಿದ್ದ ರಿಕ್ಷಾ ನಿಯಂತ್ರಣ ತಪ್ಪಿ ಅಪಘಾತ ಕ್ಕೀಡಾಗಿ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಜ.4ರಂದು ಅಜ್ಜರಕಾಡು ಸಮೀಪ ನಡೆದಿದೆ.
ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದು ಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದರೆನ್ನಲಾಗಿದೆ.
ಇದರಿಂದ ನಿಯಂತ್ರಣ ತಪ್ಪಿದ ರಿಕ್ಷಾ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Next Story





