Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಕಿಶೋರ ಯಕ್ಷಗಾನ ಸಂಭ್ರಮ...

ಕುಂದಾಪುರ: ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ6 Jan 2024 8:29 PM IST
share
ಕುಂದಾಪುರ: ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ

ಉಡುಪಿ, ಜ.6: ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜು ವಠಾರದಲ್ಲಿ ಜರಗಿದ ಯಕ್ಷಶಿಕ್ಷಣ ಟ್ರಸ್ಟ್‌ನ ಕುಂದಾಪುರ ಪರಿಸರದ ಐದು ಶಾಲೆಗಳ ಆರು ಪ್ರದರ್ಶನ ಸಮಾಪನಗೊಂಡಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕರಾದ ಕಿರಣ್‌ಕುಮಾರ್ ಕೊಡ್ಗಿ ಈ ಮಹಾ ಅಭಿಯಾನ ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ. ಮುಂದೆಯೂ ನಾವೆಲ್ಲ ಒಟ್ಟಾಗಿ ನಮ್ಮ ಮಣ್ಣಿನ ಈ ಶ್ರೀಮಂತ ಕಲೆ ಯನ್ನು ಉಳಿಸಿ ಬೆಳೆಸೋಣ ಎಂದು ಹೇಳಿದರು.

ಕುಂದಾಪುರದ ಸಹಾಯಕ ಆಯುಕ್ತರಾದ ರಶ್ಮಿ ಬಿ.ಎಸ್. ಪ್ರಮಾಣಪತ್ರ ವಿತರಿಸಿ ಮಾತನಾಡುತ್ತಾ ಯಕ್ಷಗಾನ, ಭರತ ನಾಟ್ಯ ಶಾಸ್ತ್ರದಲ್ಲಿ ಹೇಳಿರುವ ಆಂಗಿಕ, ಆಹಾರ್ಯ, ವಾಚಿಕ, ಸಾತ್ವಿಕ ಈ ನಾಲ್ಕೂ ಅಂಶ ಒಳಗೊಂಡಿರುವ ಪರಿಪೂರ್ಣ ಕಲಾಪ್ರಕಾರ ಎಂದು ಅಭಿಪ್ರಾಯ ಪಟ್ಟರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪ ಪ್ರಾಂಶುಪಾಲ ಕಿರಣ್ ಹೆಗ್ಡೆ, ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಯು, ಸಿ.ಎ. ಬ್ಯಾಂಕ್ ಅಧ್ಯಕ್ಷ ಸದಾನಂದ ಬಳ್ಕೂರು ಅಭ್ಯಾಗತರಾಗಿ ಭಾಗವಹಿಸಿದ್ದರು.

ಪೆರ್ಡೂರು ಮೇಳದ ಸಂಚಾಲಕ ಕರುಣಾಕರ ಶೆಟ್ಟಿ, ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್.ವಿ.ಭಟ್ ಹಾಗು ಕೋಶಾಧಿಕಾರಿ ಪ್ರೊ. ಸದಾಶಿವ ರಾವ್ ಉಪಸ್ಥಿತರಿದ್ದರು. ಯಕ್ಷಗಾನದಲ್ಲಿ ಪಾತ್ರ ನಿರ್ವಸಿದ ಸುಪ್ರಿತಾ, ಪೂರ್ವಿ, ಸಾನ್ವಿಕಾ ಮತ್ತು ಪೃಥ್ವಿರಾಜ್ ತಮ್ಮ ಯಕ್ಷಶಿಕ್ಷಣದ ಅನುಭವಗಳನ್ನು ಹಂಚಿಕೊಂಡರು. ಹೆಸ್ಕುತ್ತೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಬ್ದುಲ್ ರವೂಫ್ ಮಾತನಾಡಿ ಯಕ್ಷಶಿಕ್ಷಣವು ವಿದ್ಯಾರ್ಥಿಗಳ ಮೇಲೆ ಉಂಟುಮಾಡಿದ ಪರಿಣಾಮವನ್ನು ವಿವರಿಸಿದರು.

ಪ್ರದರ್ಶನ ಸಂಘಟನಾ ಸಮಿತಿಯ ಕಾರ್ಯದರ್ಶಿ ಶಂಕರ್ ಅಂಕದಕಟ್ಟೆ ಸ್ವಾಗತಿಸಿದರು. ನವೆಂಬರ್ 29ರಂದು ಆರಂಭ ಗೊಂಡ ಕಿಶೋರ ಯಕ್ಷಗಾನ ಸಂಭ್ರಮದ ಈ ಮಹಾಭಿಯಾನವು ಉಡುಪಿ, ಕಾಪು ಹಾಗೂ ಕುಂದಾಪುರದ 69 ಶಾಲೆಗಳ 70 ಪ್ರದರ್ಶನಗಳೊಂದಿಗೆ ಮುಕ್ತಾಯಗೊಂಡಿತು. ಇದರಲ್ಲಿ ಒಟ್ಟು 2154 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಇವರಲ್ಲಿ ಮೂರನೇ ಎರಡು ಭಾಗ ಹುಡುಗಿಯರಾಗಿದ್ದರು. 13 ಮುಸ್ಲಿಂ, 12 ಕ್ರಿಶ್ಚಿಯನ್, 409 ಹೊರಜಿಲ್ಲೆ, 3 ಹೊರ ರಾಜ್ಯದ ಹಾಗೂ ಓರ್ವ ಹೊರದೇಶದ ವಿದ್ಯಾರ್ಥಿ ಭಾಗವಹಿಸಿದ್ದು ವಿಶೇಷವಾಗಿದೆ.

ಈ ಅಭಿಯಾನ ಯಶಸ್ವಿಯಾಗುವಲ್ಲಿ ವಿಶೇಷ ಆಸ್ಥೆ ತೋರಿದ ಉಡುಪಿ, ಕಾಪು, ಕುಂದಾಪುರ ಕ್ಷೇತ್ರದ ಶಾಸಕತ್ರಯರಿಗೆ ಹೃದಯಪೂರ್ವಕವಾದ ಧನ್ಯತೆ ಯನ್ನು ಟ್ರಸ್ಟ್‌ನ ಕಾರ್ಯದರ್ಶಿ ಮುರಲಿ ಕಡೆಕಾರ್ ಸಮರ್ಪಿಸಿ ಕಾರ್ಯಕ್ರಮ ನಿರೂಪಿಸಿದರು.

ಸಮಾರಂಭದ ಪೂರ್ವದಲ್ಲಿ ಸರಕಾರಿ ಪ್ರೌಢಶಾಲೆ, ಹೆಸ್ಕುತ್ತೂರಿನ ವಿದ್ಯಾರ್ಥಿಗಳಿಂದ, ಮಂಜುನಾಥ ಕುಲಾಲ್ ಇವರ ನಿರ್ದೇಶನದಲ್ಲಿ ಮೇಧಾ ಕಾಳಗ ಹಾಗೂ ಸಭೆಯ ಬಳಿಕ ಕೋಟೇಶ್ವರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ, ನರಸಿಂಹ ತುಂಗ ಇವರ ನಿರ್ದೇಶನದಲ್ಲಿ ದ್ರೌಪದಿ ಪ್ರತಾಪ ಯಕ್ಷಗಾನ ಪ್ರದರ್ಶನಗೊಂಡವು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X