Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯೋಗಪಟು ತನುಶ್ರೀ ಸಂಸ್ಕೃತಿ ಯೋಗದ ಯೋಧೆ:...

ಯೋಗಪಟು ತನುಶ್ರೀ ಸಂಸ್ಕೃತಿ ಯೋಗದ ಯೋಧೆ: ಸುಭಾಸ್ ಬೈಲೂರು

ತನು ಯೋಗ ಭೂಮಿಗೆ 100 ರ ಸಂಭ್ರಮ; ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ7 Jan 2024 7:17 PM IST
share
ಯೋಗಪಟು ತನುಶ್ರೀ ಸಂಸ್ಕೃತಿ ಯೋಗದ ಯೋಧೆ: ಸುಭಾಸ್ ಬೈಲೂರು

ಉಡುಪಿ: ದೇಶದ ಗಡಿ ಕಾಯುವ ಸೈನಿಕರು ಗಾಳಿ, ಮಳೆ, ಚಳಿ ಯನ್ನು ಲೆಕ್ಕಿಸದೇ ದೇಶ ರಕ್ಷಣೆಯ ಕಾಯಕದಿಂದ ಯೋಧರಾಗಿ ಗುರುತಿಸಿ ಕೊಂಡರೆ ಯೋಗಪಟು ತನುಶ್ರೀ ಪಿತ್ರೋಡಿ, ಈ ನೆಲದ ಸಂಸ್ಕೃತಿಯ ಯೋಗವನ್ನು ವಿಭಿನ್ನ ಶೈಲಿಯಲ್ಲಿ ಪ್ರಚುರ ಪಡಿಸುವ ಮೂಲಕ ಯೋಗದ ಯೋಧೆಯಾಗಿದ್ದಾಳೆ ಎಂದು ಮಾಜಿ ಸೈನಿಕ, ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರಿ ಸಂಘದ ಸುಭಾಸ್ ಬೈಲೂರು ಹೇಳಿದ್ದಾರೆ.

ಉಡುಪಿಯ ಸೈಂಟ್ ಸಿಸಿಲಿಸ್ ಪ್ರೌಢಶಾಲೆಯ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾಗಿದ್ದ ತನು ಯೋಗ ಭೂಮಿ ಕಾರ್ಯಕ್ರಮದ 100ರ ಸಂಭ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸನ್ಮಾನ: ಈ ಸಂದರ್ಭದಲ್ಲಿ ಮಾಜಿ ಸೈನಿಕ ವ್ಯಾಸರಾಜ ಶರವೂರು, ಕೃಷಿಕ ಜುಲಿಯನ್ ದಾಂತಿ, ರಂಗಭೂಮಿ ಕಲಾವಿದ ಗಂಗಾಧರ್ ಕಿದಿಯೂರು, ನಗರಸಭೆ ಪೌರ ಕಾರ್ಮಿಕ ಸುರೇಶ್, ಸಾಹಿತಿ ಧೀರಜ್ ಬೆಳ್ಳಾರೆ, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ರಾಷ್ಟ್ರೀಯ ಯೋಗಪಟುಗಳಾದ ನಾಜಿಯಾ ಕಾರ್ಕಳ, ನಿರೀಕ್ಷಾ ಪೂಜಾರಿ, ಅನ್ವಿ ಅಂಚನ್, ಉದ್ಭವ್ ಜಿ. ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.

ಸೈಂಟ್ ಸಿಸಿಲಿಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮಯೋಲಾ ಸಿಸ್ಟರ್ ಅಧ್ಯಕ್ಷತೆ ವಹಿಸಿದ್ದರು. ನೃತ್ಯಗುರು ರಾಮಕೃಷ್ಣ ಕೊಡಂಚ, ಕಾರ್ತಿಕ್ ಕಡೆಕಾರ್, ವಿಜಯಕುಮಾರ್, ರಾಕೇಶ್ ಕಟಪಾಡಿ, ಉಡುಪಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಗಾಯತ್ರಿ ಮುತ್ತಪ್ಪ ಕೆ. ಉಪಸ್ಥಿತರಿದ್ದರು.

ಉದಯ ಕುಮಾರ್ ಪಿತ್ರೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾಲ ನಟಿ ರಿತುಶ್ರೀ ಪಿತ್ರೋಡಿ ಪ್ರಾರ್ಥಿಸಿದರು. ಸಂಧ್ಯಾ ಪಿತ್ರೋಡಿ ಸಹಕರಿಸಿದರು. ನಾಗರಾಜ ವರ್ಕಾಡಿ ಕಾರ್ಯಕ್ರಮ ನಿರೂಪಿಸಿದರು.

ಗಮನ ಸೆಳೆದ ತನುಶ್ರೀ ಯೋಗ ನೃತ್ಯ

ಯೋಗ ಪಿತಾಮಹ ಪತಂಜಲಿ ಋಷಿಯ ಕುರಿತು, ಯೋಗದ ಮಹತ್ವ, ಯೋಗಾಭ್ಯಾಸದಿಂದಾಗುವ ಅನುಕೂಲ ಹಾಗೂ ಭಾರತ ದೇಶದ ವಿಶಿಷ್ಟತೆ ಕುರಿತಂತೆ ಯೋಗಪಟು ತನುಶ್ರೀ ಪಿತ್ರೋಡಿ ಯೋಗನೃತ್ಯ ಪ್ರದರ್ಶನ ಮೂಲಕ ಸಭಿಕರ ಗಮನ ಸೆಳೆದರು.

ಸುಮಾರು 40 ನಿಮಿಷಗಳ ಕಾಲ ನಾನಾ ಯೋಗಾಸನಗಳ ಪ್ರಕಾರಗಳನ್ನು ಪ್ರಸ್ತುತಪಡಿಸಿದ ಅವರು, ತನ್ನ ಪ್ರತಿಭೆಯನ್ನು ಅನಾವರಣಗೊಳಿಸಿದರು. ಇದುವರೆಗೆ ತನುಯೋಗ ಭೂಮಿ ಕಾರ್ಯಕ್ರಮವನ್ನು 100 ಶಾಲೆಗಳ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವೀಕ್ಷಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X