Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರಸಭೆ ದುರಾಡಳಿತ ಆರೋಪಿಸಿ...

ಉಡುಪಿ ನಗರಸಭೆ ದುರಾಡಳಿತ ಆರೋಪಿಸಿ ಕಚೇರಿಗೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ9 Jan 2024 6:32 PM IST
share
ಉಡುಪಿ ನಗರಸಭೆ ದುರಾಡಳಿತ ಆರೋಪಿಸಿ ಕಚೇರಿಗೆ ಮುತ್ತಿಗೆ

ಉಡುಪಿ: ಉಡುಪಿ ನಗರಸಭೆಯ ಆಡಳಿತಾಧಿಕಾರಿ ದುರಾಡಳಿತ ನಡೆಸುತ್ತಿರುವುದಾಗಿ ಆರೋಪಿಸಿ ಉಡುಪಿ ನಗರ ಬಿಜೆಪಿ ನೇತೃತ್ವದಲ್ಲಿ ಇಂದು ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಹೆಚ್ಚಿದ್ದು, ಭ್ರಷ್ಟಾಚಾರ ಮಿತಿಮೀರಿದೆ. ಜನಸಮಾನ್ಯರ ಕೆಲಸ ಮತ್ತು ನಗರ ಮೂಲ ಸೌಕರ್ಯ ಅಭಿವೃದ್ಧಿ ಕುಂಠಿತ ಗೊಂಡಿದೆ. ನಗರದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಲು ಪೌರಾಯುಕ್ತರು, ಆಡಳಿತಾಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ನಗರಸಭೆ ಸಂಬಂಧಿಸಿದ ಖಾತಾ ಬದಲಾವಣೆ, ಇ-ಖಾತಾ, ಬ್ರೋಕರ್ ಹಾವಳಿ, ಕಳಪೆ ಕಾಮಗಾರಿ ಸಂಬಂಧಿಸಿ ಎಲ್ಲ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇನೆ. ಈ ಕುರಿತು ಜಿಲ್ಲೆ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಬಹಿರಂಗ ಚರ್ಚೆ ನಡೆಯಲಿ. ಉಡುಪಿ ನಗರದ ಜನತೆ ಪತರವಾಗಿ ನಗರಸಭೆ ಅಧಿಕಾರಿಗಳ ಭ್ರಷ್ಟಾಚಾರ ಮತ್ತು ದುರಾಡಳಿತ ವಿರುದ್ಧ ಸಾಕ್ಷಿ ಸಮೇತ ಚರ್ಚೆ ನಡೆಸಲು ಸಿದ್ಧನಿದ್ದೇನೆ ಎಂದು ಸವಾಲು ಹಾಕಿದರು.

ಬಳಿಕ ನಗರಸಭೆ ಅಧಿಕಾರಿಗಳ ಮೂಲಕ ನಗರಸಭೆ ಆಡಳಿತಾಧಿಕಾರಿಯಾಗಿ ರುವ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸ ಲಾಯಿತು. ತಿಂಗಳಿಗೊಮ್ಮೆ ನಗರಸಭಾ ಸದಸ್ಯರ ಸಭೆ ನಡೆಸಬೇಕು. ವಾರಕ್ಕೆ ಒಂದು ದಿನ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿ ಪರಿಹಾರ ಒದಗಿಸಲು ಕ್ರಮ ತೆಗೆದುಕೊಳ್ಳಬೇಕು. ಕಳಪೆ ಕಾಮಗಾರಿ ಬಹ್ಗೆ ಸೂಕ್ತ ತನಿಖೆ ನಡೆಸಬೇಕು. ಕುಡಿಯುವ ನೀರಿನ ಅವೈಜ್ಞಾನಿಕ ದರ ಹೆಚ್ಚಳವನ್ನು ಹಿಂಪಡೆಯ ಬೇಕು. ಅಕ್ರಮ ಕಟ್ಟಡಗಳಿಗೆ ನೀಡಿರುವ ಪರವಾನಿಗೆಯನ್ನು ತಕ್ಷಣ ರದ್ದುಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಮಟ್ಟಾರು ರತ್ನಾಕರ್ ಹೆಗ್ಡೆ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ, ಪ್ರಮುಖರಾದ ವೀಣಾ ಶೆಟ್ಟಿ, ಗೀತಾಂಜಲಿ ಸುವರ್ಣ, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ವೀಣಾ ನಾಯ್ಕ್ ಮತ್ತು ನಗರಸಭೆ ಸದಸ್ಯರಾದ ಸುಮಿತ್ರಾ ಆರ್.ನಾಯಕ್, ವಿಜಯ ಕೊಡವೂರು, ಯೋಗೀಶ್ ಸಾಲ್ಯಾನ್, ಪ್ರಭಾಕರ್ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಕೃಷ್ಣರಾವ್ ಕೊಡಂಚ ಉಪಸ್ಥಿತರಿದ್ದರು.

‘ಬಿಜೆಪಿ ಆಡಳಿತವಿರುವ ನಗರಸಭೆಗೆ ಮುತ್ತಿಗೆ ಹಾಸ್ಯಾಸ್ಪದ’

ತಮ್ಮದೇ ಪಕ್ಷದ ಆಡಳಿತವಿರುವ ಉಡುಪಿ ನಗರಸಭೆಯ ವಿರುದ್ದ ಮುತ್ತಿಗೆ ಹಾಕಲು ಹೊರಟಿರುವ ನಗರ ಬಿಜೆಪಿ ಹಾಗೂ ಶಾಸಕ ಯಶಪಾಲ್ ಸುವರ್ಣ ಅವರ ವರ್ತನೆ ನಿಜಕ್ಕೂ ಹಾಸ್ಯಾಸ್ಪದವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾಗೂ ಉಡುಪಿ ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್ ವ್ಯಂಗ್ಯವಾಡಿದ್ದಾರೆ.

ಉಡುಪಿ ನಗರಕ್ಕೆ ಉತ್ತಮ ಆಡಳಿತ ಕೊಡುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ ತನ್ನ ಅವಧಿಯಲ್ಲೇ ವ್ಯಾಪಕ ಭ್ರಷ್ಠಾಚಾರ ನಡೆಸಿದ್ದು ಅದನ್ನು ಈಗಿನ ಕಾಂಗ್ರೆಸ್ ಆಡಳಿತದ ರಾಜ್ಯ ಸರಕಾರದ ತಲೆಗೆ ಕಟ್ಟುವ ಕೆಲಸ ನಡೆಸುತ್ತಿದೆ. ಕುಡಿಯುವ ನೀರಿನ ವಿಪರೀತ ಬೆಲೆ ಏರಿಕೆ, ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರ ಇವರ ಆಡಳಿತದಲ್ಲಿ ನಡೆದಿದೆ ಎಂದು ಉಡುಪಿಯ ನಾಗರಿಕರಿಗೆ ಸ್ಪಷ್ಠವಾಗಿ ತಿಳಿದಿದೆ ಎಂದು ಅವರು ತಿಳಿಸಿದರು.

ಕುಡಿಯುವ ನೀರಿನ ಬೆಲೆ ಏರಿಕೆ ಮಾಡಿರುವುದು ಇವರ ನಗರಸಭೆಯ ಆಡಳಿತವಧಿಯಲ್ಲಿ. ಅದನ್ನು ಕಾರ್ಯರೂಪಕ್ಕೆ ತರುವ ಕೆಲಸವನ್ನು ನಗರಸಭೆಯ ಅಧಿಕಾರಿಗಳು ಮಾಡುತ್ತಿದ್ದಾರೆ. ನೀರಿನ ಬೆಲೆ ಏರಿಕೆ ಆಗಿದ್ದು ನಿಜಕ್ಕೂ ಖಂಡನೀಯ. ಇವರ ವೈಫಲ್ಯವನ್ನು ಮರೆಮಾಚಲು ಭ್ರಷ್ಟಾಚಾರದ ನೆಪವನ್ನಿಟ್ಟು ಕೊಂಡು ಪ್ರತಿಭಟನೆ ಮಾಡುವ ಮೂಲಕ ಅಧಿಕಾರಿಗಳನ್ನು ಹೆದರಿಸಿ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಬಿಜೆಪಿಗರ ಪ್ರಯತ್ನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X