Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಳ್ತೂರು-ಕಟ್ಟೆಮನೆಯಲ್ಲಿ ಶಾಸನೋಕ್ತ...

ಉಳ್ತೂರು-ಕಟ್ಟೆಮನೆಯಲ್ಲಿ ಶಾಸನೋಕ್ತ ವೀರಗಲ್ಲು ಪತ್ತೆ

ವಾರ್ತಾಭಾರತಿವಾರ್ತಾಭಾರತಿ10 Jan 2024 9:48 PM IST
share
ಉಳ್ತೂರು-ಕಟ್ಟೆಮನೆಯಲ್ಲಿ ಶಾಸನೋಕ್ತ ವೀರಗಲ್ಲು ಪತ್ತೆ

ಉಡುಪಿ, ಜ.10: ಕುಂದಾಪುರ ತಾಲೂಕಿನ ಉಳ್ತೂರು ಕಟ್ಟೆಮನೆಯ ಬೊಬ್ಬರ್ಯ ದೈವಸ್ಥಾನದ ಹಾಡಿಯಲ್ಲಿ ಶಾಸನ ಸಹಿತವಾದ ಒಂದು ವೀರಗಲ್ಲು ಕಂಡುಬಂದಿದೆ ಎಂದು ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ನಿವೃತ್ತ ಇತಿಹಾಸ ಪ್ರಾಧ್ಯಾಪಕ, ಪುರಾತತ್ವ ಸಂಶೋಧಕ ಪ್ರೊ. ಟಿ.ಮುರುಗೇಶಿ ತಿಳಿಸಿದ್ದಾರೆ.

ಶಾಸನವನ್ನು ಒಂದು ಆಯತಾಕಾರದ ಶಿಲೆಯ ಮೇಲೆ ಚಿತ್ರಪಟ್ಟಿಕೆ ಸಹಿತವಾಗಿ ಚಿತ್ರಿಸಲಾಗಿದೆ. ಶಾಸನದ ಮೇಲ್ಭಾಗದಲ್ಲಿ ಚಿತ್ರಪಟ್ಟಿಕೆ ಇದ್ದು, ಅದರ ಕೆಳಭಾಗದಲ್ಲಿ ನಾಲ್ಕು ಸಾಲಿನ ಬರಹವನ್ನು ಕಂಡರಿಸಲಾಗಿದೆ. ಶಾಸನವನ್ನು ಕನ್ನಡ ಭಾಷೆ ಮತ್ತು ಲಿಪಿಯಲ್ಲಿ ಬರೆಯಲಾಗಿದೆ.

ಶಾಸನವು ಶ್ರೀಗಣಾಧಿಪತಯೇ ನಮಃ ಎಂದು ಆರಂಭವಾಗಿದ್ದು, ಪ್ರಜೋತ್ಪತ್ತಿ ಸಂವತ್ಸರದ ಶು 10 ಲೂ ಲವಮಾಳುವನ ವಾಳೆಯ (ಹೆಸರು ನಷ್ಟವಾಗಿದೆ) ಹತನಾದ, ಮೃತ ವಾಳೆಯನ ನೆನಪಿಗೆ ಯಾರೋ (ಹೆಸರು ನಷ್ಟವಾಗಿದೆ) ಈ ವೀರಗಲ್ಲನ್ನು ಹಾಕಿಸಿದರು, ಶಾಸನ ಶುಭಮಸ್ತು ಎಂದು ಕೊನೆಯಾಗಿದೆ.

ಚಿತ್ರಪಟ್ಟಿಕೆ: ಶಾಸನದ ಚಿತ್ರಪಟ್ಟಿಕೆಯ ಮಧ್ಯಭಾಗದಲ್ಲಿ ಒಬ್ಬ ವೀರ ವೀರಭಂಗಿಯಲ್ಲಿ, ತನ್ನ ಬಲಗೈಯಲ್ಲಿ ಖಡ್ಗವನ್ನು ಎತ್ತಿಹಿಡಿದಿದ್ದು, ಎಡಗೈಯಲ್ಲಿ ಗುರಾಣಿಯನ್ನು ಹಿಡಿದು ನಿಂತಿರುವಂತೆ ಪ್ರಧಾನವಾಗಿ ಚಿತ್ರಿಸಲಾಗಿದೆ. ವೀರನ ಎಡಭಾಗದಲ್ಲಿ ಛತ್ರವನ್ನು ಹಿಡಿದು ನಿಂತಿರುವ ವ್ಯಕ್ತಿಯೊಬ್ಬನ ಶಿಲ್ಪವಿದೆ. ಬಲಭಾಗದಲ್ಲಿ ನಿಂತಿರುವ ವ್ಯಕ್ತಿ ತನ್ನ ಎಡಗೈಯ ಕತ್ತಿಯಿಂದ ತನ್ನ ಹೊಟ್ಟೆಯನ್ನು ಇರಿದುಕೊಂಡಿದ್ದು, ಬಲಗೈಯಲ್ಲಿ ಗುರಾಣಿಯಿದೆ. ಈ ಶಿಲ್ಪಗಳ ಮೇಲ್ಭಾಗದಲ್ಲಿ ಚಂದ್ರ ಮತ್ತು ಸೂರ್ಯರ ಉಬ್ಬು ಶಿಲ್ಪಗಳಿವೆ. ಚಿತ್ರಪಟ್ಟಿಕೆ ಒಂದು ನಿರೂಪಣಾತ್ಮಕ ಶಿಲ್ಪವಾಗಿದ್ದು, ಚರಿತ್ರೆಯ ಘಟನಾವಳಿಯೊಂದನ್ನು ಸುಂದರವಾಗಿ ನಿರೂಪಿಸಿದೆ.

ಶಾಸನದ ಮಹತ್ವ: ಶಾಸನದಲ್ಲಿ ನೀಡಿರುವ ಕಾಲದ ವಿವರಗಳು, ಕಾಲಮಾನವನ್ನು ನಿರ್ಧರಿಸಲು ಸಾಕಾಗುವುದಿಲ್ಲ. ಶಾಸನದ ಲಿಪಿ ಲಕ್ಷಣದ ಆಧಾರದ ಮೇಲೆ ಇದ್ನು 15-16ನೇ ಶತಮಾನದ ಶಾಸನವೆಂದು ನಿರ್ಧರಿಸ ಬಹುದಾಗಿದೆ.

ಶಾಸನೋಕ್ತ ವಿವರಗಳು ಮತ್ತು ಚಿತ್ರಿತ ಶಿಲ್ಪಗಳ ಅಧ್ಯಯನದಿಂದ, ಶಾಸನೋಕ್ತ ಲವ ಆಳುವ ಯಾವುದೋ ಘಟನೆಯಲ್ಲಿ ಮರಣ ಹೊಂದಿದ್ದು, ಆತನ ವಾಳೆರ ಅಥವಾ ವೇಳೆವಾಳಿ ತನ್ನ ಯಜಮಾನನ ಮರಣಾ ನಂತರ ತನ್ನನ್ನು ತಾನೆ ಇರಿದು ಕೊಂಡು ಮರಣ ಹೊಂದಿದ್ದಾನೆಂದು ತಿಳಿಯಬಹುದಾಗಿದೆ.

ಶಾಸನವು ಗುಳ್ಳಾಡಿಯ ಕೋಟೆಯ ಹೊರಭಾಗದ ಹಾಡಿಯಲ್ಲಿದೆ. ಗುಳ್ಳಾಡಿಯಲ್ಲಿ ಆಳುಪ ರಾಣಿ ಹಾಗೂ ಹೊಯ್ಸಳ 3ನೇ ವೀರ ಬಲ್ಲಾಳನ ಪಟ್ಟದರಸಿ ಚಿಕ್ಕಾಯಿ ತಾಯಿಯ ಶಾಸನವಿದೆ. ಗುಳ್ಳಾಡಿ ಕೋಟೆಯಿಂದ ಆವೃತ್ತವಾದ ಒಂದು ಹಳ್ಳಿಯಾಗಿದ್ದು, ಚಿಕ್ಕಾಯಿ ತಾಯಿಯ ಮಾತೃಮೂಲ ಮನೆಯಾಗಿದ್ದಂತೆ ಕಂಡುಬರುತ್ತದೆ. ಆಳುಪ ಅರಸಿಯರು ತಮ್ಮ ಮಾತೃಮೂಲ ಮನೆಗಳಲ್ಲಿಯೇ ಇದ್ದ ಬಗ್ಗೆ ಆಳುಪ ಶಾಸನಗಳಲ್ಲಿ ಮಾಹಿತಿ ಲಭ್ಯವಿದೆ.

ಆದ್ದರಿಂದ, ಶಾಸನೋಕ್ತ ಲವ ಆಳುವ ಈ ರಾಜ ಕುಟುಂಬಕ್ಕೆ ಸೇರಿದ ವ್ಯಕ್ತಿಯಾಗಿದ್ದು ಆತನ ಮರಣಾ ನಂತರ ಆತನ ವೇಳೆವಾಳಿ ತಾನೆ ಇರಿದುಕೊಂಡು ಮೃತಪಟ್ಟಿದ್ದಾನೆ. ಈ ವೀರಗಲ್ಲನ್ನು ಸ್ಥಳೀಯರು ಬೊಬ್ಬರ್ಯನ ಕಲ್ಲು ಎಂದು ಆರಾಧಿಸುತ್ತಿರುವುದು ಅತ್ಯಂತ ಕುತೂಹಲದ ಸಂಗತಿಯಾಗಿದೆ. ಅಂದಿನ ಸಾಮಾಜಿಕ ಅಂತಸ್ತಿನಲ್ಲಿ ವಳೆರಾ ಅಥವಾ ವೇಳೆವಾಳಿಯ ಅಂತ್ಯಸಂಸ್ಕಾರವನ್ನು ಗುಳ್ಳಾಡಿ ಗ್ರಾಮದ ಹೊರವಲಯದಲ್ಲಿ ನಡೆಸಿರಬೇಕು ಎಂದು ಅಂದಾಜಿಸಬಹು ದಾಗಿದೆ ಎಂದು ಡಾ.ಮುರಗೇಶಿ ತಿಳಿಸಿದ್ದಾರೆ.

ಗುಳ್ಳಾಡಿಯ ಸುತ್ತಮುತ್ತ ಪುರಾತತ್ವ ಅನ್ವೇಷಣೆ ನಡೆಸಲು ಕಾರಣಕರ್ತರಾದ ಗುಳ್ಳಾಡಿಯ ಡಾ. ರಘುರಾಮ ಶೆಟ್ಟಿ, ಬೊಬ್ಬರ್ಯ ದೈವಸ್ಥಾನದ ಅನುವಂಶಿಕ ಮೊಕ್ತೇಸರ ಸೀತಾರಾಮ ಶೆಟ್ಟಿ ಅವರಿಗೆ, ಬೇಳೂರು ಗ್ರಾಪಂ ಅಧ್ಯಕ್ಷರಾದ ಜಯಶೀಲ ಶೆಟ್ಟಿ, ರವಿರಾಜ್ ಶೆಟ್ಟಿ ಹಾಗೂ ತನ್ನ ವಿದ್ಯಾರ್ಥಿಗಳಿಗೆ ಆಭಾರಿಯಾಗಿದ್ದೇನೆ ಎಂದು ಡಾ.ಮುರುಗೇಶಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X