ಬೈಕ್ ಅಪಘಾತ: ಸವಾರ ಮೃತ್ಯು, ಇಬ್ಬರಿಗೆ ಗಾಯ

ಬ್ರಹ್ಮಾವರ, ಜ.10: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸವಾರರೊಬ್ಬರು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಡಿ.10ರಂದು ಬೆಳಗ್ಗೆ 8ಗಂಟೆಗೆ ನಡೆದಿದೆ.
ಮೃತರನ್ನು ಬೈಕ್ ಸವಾರ ಚೇತನ್ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಸಹ ಸವಾರ ಪುನೀತ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಹಾಗೂ ಪಾದಾಚಾರಿ ಗಣೇಶ ಸೇರ್ವೆಗಾರ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬ್ರಹ್ಮಾವರ ಕಡೆಯಿಂದ ಹೋಗುತ್ತಿದ್ದ ಬೈಕ್, ರಸ್ತೆ ದಾಟುತ್ತಿದ್ದ ಗಣೇಶ ಸೇರ್ವೆಗಾರ್‌ಗೆ ಢಿಕ್ಕಿ ಹೊಡೆದು, ಬಳಿಕ ರಸ್ತೆಯ ಮಧ್ಯದ ಡಿವೈಡರ್ ಹತ್ತಿ ಬಿತ್ತೆನ್ನಲಾಗಿದೆ. ಇದರಿಂದ ಇಬ್ಬರು ಬೈಕ್ ಸವಾರರು ಹಾಗೂ ಗಣೇಶ್ ಸೆರ್ವೆಗಾರ್ ಗಾಯಗೊಂಡರು.
ಇದರಲ್ಲಿ ಗಂಭೀರವಾಗಿ ಗಾಯಗೊಂಡ ಚೇತನ್ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





