ಗೃಹರಕ್ಷಕ ಸ್ವಯಂ ಸೇವಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜ.12: ಗೃಹರಕ್ಷಕ ದಳದ ಸ್ವಯಂ ಸೇವಕ ಹುದ್ದೆಗೆ ಕನಿಷ್ಠ 167 ಸೆಂ.ಮೀ. ಎತ್ತರ ಇರುವ, 19ರಿಂದ 50 ವರ್ಷದೊಳಗಿನ ಎಸೆಸೆಲ್ಸಿ ಉತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಸಮಾದೇಷ್ಟರ ಕಛೇರಿ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820- 2533650 ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಗೃಹರಕ್ಷಕದಳದ ಕಛೇರಿ ಪ್ರಕಟಣೆ ತಿಳಿಸಿದೆ.
Next Story





