ಶಿರ್ವ: ರಾಷ್ಟ್ರೀಯ ಯುವ ದಿನಾಚರಣೆ

ಶಿರ್ವ, ಜ.13: ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಉಡುಪಿ ಮತ್ತು ಶಿರ್ವ ಮಹಿಳಾ ಮಂಡಲದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನ ಮತ್ತು ಸ್ವಾಮಿ ವಿವೇಕಾನಂದರ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.
ಮಹಿಳಾ ಮಂಡಲದ ಅಧ್ಯಕ್ಷೆ ಡಾ.ಸ್ಪೂರ್ತಿ ಪಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸುಪ್ರೀತಾ ಶೆಟ್ಟಿ ವಿವೇಕಾನಂದರ ಮಾತನಾಡಿದರು. ಉಪಾಧ್ಯಕ್ಷೆ ಗೀತಾ ಮೂಲ್ಯ, ಜೊತೆ ಕಾರ್ಯದರ್ಶಿ ಗೌರಿ ಶೆಣೈ, ಖಜಾಂಚಿ ದೀಪಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮಹಿಳಾ ಮಂಡಲದ ಗೌರವಾಧ್ಯಕ್ಷೆ ಬಬಿತಾ ಜಗದೀಶ್ ಅರಸ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ವಿನಯಾ ಕುಂದರ್ ಸ್ವಾಗತಿಸಿದರು. ಸುನೀತಾ ಕಳತ್ತೂರು ವಂದಿಸಿದರು.ನಿಕಟಪೂರ್ವ ಅಧ್ಯಕ್ಷ ಗೀತಾ ವಾಗ್ಳೆ ಕಾರ್ಯಕ್ರಮ ನಿರೂಪಿಸಿದರು.
Next Story





