ಆರೋಗ್ಯ ಇಲಾಖೆಯ ಕ್ಯಾಲೆಂಡರ್, ಡೈರಿ ಬಿಡುಗಡೆ

ಉಡುಪಿ, ಜ.16:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ದಡಿ, ಕ್ಷಯರೋಗ ಕುರಿತು ಮಾಹಿತಿಗಳನ್ನು ಹೊಂದಿರುವ ಪ್ರಸಕ್ತ ಸಾಲಿನ ಕ್ಯಾಲೆಂಡರ್ ಹಾಗೂ ಡೈರಿಯನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಿಡುಗಡೆ ಗೊಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ. ರಾಮರಾವ್, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿ ಕಾರಿ ಡಾ.ಪ್ರಶಾಂತ್ ಭಟ್, ಡಾ. ಜೋಶ್ನಾ ಮತ್ತಿತರರು ಉಪಸ್ಥಿತರಿದ್ದರು.
Next Story





