ಪ್ರತ್ಯೇಕ ಪ್ರಕರಣ: ನಾಲ್ವರ ಆತ್ಮಹತ್ಯೆ

ಬ್ರಹ್ಮಾವರ, ಜ.16: ವೈಯಕ್ತಿಕ ಕಾರಣದಿಂದ ಮನನೊಂದ ಬಾರ್ಕೂರು ನಾಗರಮಠ ರಸ್ತೆ ನಿವಾಸಿ ಲಲಿತಾ ಎಂಬವರ ಮಗ ಶ್ಯಾಮ(38) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.16ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ: ಮದ್ಯಪಾನ ಮಾಡಿದ ಅಮಲಿನಲ್ಲಿ ಜ.7ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುನಿಯಾಲು ಗ್ರಾಮದ ಸತೀಶ(56) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಜ.15ರಂದು ಬೆಳಗ್ಗೆ ಅಜ್ಜರಕಾಡು ಉಡುಪಿ ಸರಕಾರಿ ಅಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಕಾರ್ಕಳದ ಸ್ವಾತಿ ಎಂಬವರ ಸಾಣೂರಿನ ಮನೆಯ ಬೆಡ್ ರೂಮಿನಲ್ಲಿ 25ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಜ.15ರಂದು ಬೆಳಕಿಗೆ ಬಂದಿದೆ. ಮೃತದೇಹವು ಸಂಪೂರ್ಣ ಕೊಳೆತು ಹೋಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಕರ್ಜೆ ಹೆಗ್ಗುಂಜೆಡ್ಡು ನಿವಾಸಿ ಲತಾ ಬಾಯಿ ಎಂಬವರ ಸುನೀಲ್(29) ಎಂಬಾತ ಜೀವನದಲ್ಲಿ ಜೀಗುಪ್ಸೆಗೊಂಡು ಜ.16ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.







