ಕಾಪು ಪುರಸಭಾ ವ್ಯಾಪ್ತಿಯ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ

ಕಾಪು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳ ಮಾಹಿತಿಯೊಂದಿಗೆ ನಡೆಯು ತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಇಂದು ಕಾಪು ಪುರಸಭೆಯ ಬಳಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣ ಉದ್ಯಮ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾತ್ರೆ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಮುದ್ರಾ ಯೋಜನೆ ಅಡಿ ಮಂಜೂರಾದ ಸಾಲ ಸೌಲಭ್ಯ ಆದೇಶ ಪತ್ರ ಹಾಗೂ ಉಜ್ವಲ ಯೋಜನೆಯಡಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಪುರಸಭೆಯ ಮುಖ್ಯಾಧಿಕಾರಿ ಸಂತೋಷ್, ಕಾಪು ತಹಶೀಲ್ದಾರ್ ಪ್ರತಿಭಾ, ಕಾಪು ತಾಪಂ ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಲೀಡ್ ಬ್ಯಾಂಕ್ ಪ್ರಬಂಧಕ ಬೀರ್ ಸಾಬ್ ಪಿಂಜಾರ, ನಬಾರ್ಡ್‌ನ ಸಂಗೀತಾ ಕರ್ತ, ಕೆನರಾ ಬ್ಯಾಂಕ್ ಪ್ರಾದೇಶಿಕ ಪ್ರಬಂಧಕ ಸಂತ್ಮಿದೆರ್ ಸಿಂಗ್, ಬ್ಯಾಂಕ್ ಆಫ್ ಬರೋಡಾ ಉಪ ಪ್ರಾದೇಶಿಕ ಪ್ರಬಂಧಕ ವಿದ್ಯಾಧರ ಶೆಟ್ಟಿ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಧನಂಜಯ್ ಹಾಗೂ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.







