ಸ್ಪರ್ಧಾತ್ಮಕ ಪರೀಕ್ಷೆ: ನಿಷೇದಾಜ್ಞೆ

ಉಡುಪಿ, ಜ.18: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರೀಕ್ಷಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಜನವರಿ 20 ಮತ್ತು 21 ರಂದು ಜಿಲ್ಲೆಯ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಹಾಗೂ ನಡೆಯ ಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷೆ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
Next Story





