ವೃದ್ಧೆ ನಾಪತ್ತೆ

ಉಡುಪಿ, ಜ.19: ಬ್ರಹ್ಮಾವರ ತಾಲೂಕು ಹನೇಹಳ್ಳಿ ಗ್ರಾಮದ ಮಾಸ್ತಿನಗರ ನಿವಾಸಿ ಬಚ್ಚಿ ಪೂಜಾರ್ತಿ (69) ಎಂಬ ವೃದ್ಧೆಯು 2019ರ ನವೆಂಬರ್‌ನಲ್ಲಿ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820 -2561044, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820 -2561966ನ್ನು ಸಂಪರ್ಕಿಸಬಹುದು ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





