ಬೆಂಗಳೂರಿನ ಕರ್ನಾಟಕ ಕಲಾದರ್ಶಿನಿ ನಿಡಂಬೂರುಬೀಡು ಬಲ್ಲಾಳ ಪ್ರಶಸ್ತಿಗೆ ಆಯ್ಕೆ

ಉಡುಪಿ, ಜ.20: ಇಲ್ಲಿನ ಅಂಬಲಪಾಡಿ ದೇವಳದ ಧರ್ಮದರ್ಶಿಯಾಗಿ ಕಲೆ, ಸಂಸ್ಕತಿಯನ್ನು ವಿಶೇಷವಾಗಿ ಪ್ರೋತ್ಸಾಹಿಸು ತ್ತಿದ್ದ ನಿ.ಬೀ.ಅಣ್ಣಾಜಿ ಬಲ್ಲಾಳರ ಹೆಸರಿನಲ್ಲಿ ಅವರ ಪುತ್ರ ಡಾ. ನಿ.ಬೀ. ವಿಜಯ ಬಲ್ಲಾಳರು ಸ್ಥಾಪಿಸಿದ ‘ನಿಡಂಬೂರುಬೀಡು ಬಲ್ಲಾಳ ಪ್ರಶಸ್ತಿ’ಗೆ ಬೆಂಗಳೂರಿನ ಕರ್ನಾಟಕ ಕಲದರ್ಶಿನಿ ಆಯ್ಕೆಯಾಗಿದೆ.
ಕಳೆದ ಮೂರು ದಶಕಗಳಿಂದ ಬೆಂಗಳೂರಿನಲ್ಲಿ ಯಕ್ಷಗಾನ ಕಲಿಕೆ, ಪ್ರದರ್ಶನ, ಯಕ್ಷಗಾನ ಸಂಬಂಧೀ ಗೋಷ್ಠಿ, ಕಮ್ಮಟ ಗಳನ್ನು ನಡೆಸುತ್ತಾ ಕ್ರಿಯಾಶೀಲವಾಗಿರುವ ಕರ್ನಾಟಕ ಕಲಾದರ್ಶಿನಿ ಸಂಸ್ಥೆ ಹತ್ತು ಸಾವಿರ ರೂ. ನಗದನ್ನು ಒಳಗೊಂಡ ಪ್ರಶಸ್ತಿ ಪುರಸ್ಕಾರವನ್ನು ಪಡೆಯಲಿದೆ.
ಫೆಬ್ರವರಿ 3ರ ಶನಿವಾರ ಕಂಬ್ಳಕಟ್ಟದ ಶ್ರೀಜನಾರ್ದನ ಮಂಟಪದಲ್ಲಿ ನಡೆಯುವ ಶ್ರೀಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿಯ 66ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಅಜಿತ್ ಕುಮಾರ್, ಕಾರ್ಯದರ್ಶಿ ಪ್ರಕಾಶ್ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





