ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಮಲ್ಪೆ: ವೈಯಕ್ತಿಕ ಕಾರಣದಿಂದ ಮನನೊಂದ ಕೊಡವೂರು ನಿವಾಸಿ ರಮೇಶ್(೫೦) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜ.18ರಂದು ಮನೆಯ ರೂಮಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ: ಕಾಲು ಗಂಟು ನೋವಿನಿಂದ ಬಳಲುತ್ತಿದ್ದ ತ್ರಾಸಿ ನಿವಾಸಿ ಕುಷ್ಠ (81) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.19ರಂದು ರಾತ್ರಿ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





