ಅಸಹಾಯಕ ಸ್ಥಿತಿಯಲ್ಲಿದ್ದ ತಾಯಿ, ಮಕ್ಕಳ ರಕ್ಷಣೆ
ಉಡುಪಿ: ರಾತ್ರಿ ಹೊತ್ತು ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಅವರ ಇಬ್ಬರು ಮಕ್ಕಳನ್ನು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಮುಲ್ಕಿ ಪೊಲೀಸರ ಸಹಾಯದಿಂದ ಸೋಮವಾರ ರಕ್ಷಿಸಿದ ಉಡುಪಿಯ ಸಖಿ ಸೆಂಟರಿಗೆ ದಾಖಲಿಸಿದ್ದಾರೆ.
ಕೌಟುಂಬಿಕ ಕಾರಣದಿಂದ ಮಹಿಳೆ ತನ್ನ ಎರಡು ಮಕ್ಕಳೊಂದಿಗೆ ಬೀದಿಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಮಕ್ಕಳು ಬೀದಿಗೆ ಬಿದ್ದಲ್ಲಿ ಅಪಾಯಕಾರಿ ಸನ್ನಿವೇಶಗಳು ಎದುರಾಗುವ ಸಾಧ್ಯತೆ ಇರುವುದರಿಂದ ಮಕ್ಕಳ ರಕ್ಷಣಾ ಘಟಕ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿಶು ಶೆಟ್ಟಿ ಆಗ್ರಹಿಸಿದ್ದಾರೆ.
ಈ ಹಿಂದೆ ಕೂಡ ಈ ತಾಯಿ ಮಕ್ಕಳೊಂದಿಗೆ ಬೀದಿಗೆ ಬಿದ್ದ ಮಾಹಿತಿ ಇದೆ. ಮಾತುಕತೆಯ ಮೂಲಕ ಸಮಸ್ಯೆ ಪರಿಹರಿಸಿ, ಮಹಿಳೆಯನ್ನು ಪತಿಗೆ ಹಸ್ತಾಂತರಿಸಲಾಗಿತ್ತು. ಮಹಿಳೆ ತನ್ನ ಮಕ್ಕಳನ್ನು ರಕ್ಷಿಸುವಲ್ಲಿ ವಿಫಲವಾದಲ್ಲಿ ಮಕ್ಕಳನ್ನು ಸರಕಾರದ ಪಾಲನಾ ಕೇಂದ್ರಕ್ಕೆ ದಾಖಲಿಸುವ ಮುಖಾಂತರ ರಕ್ಷಣೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
Next Story





