ಉಡುಪಿ: ಪಾರ್ಟ್‌ಟೈಮ್ ಜಾಬ್ ಹೆಸರಿನಲ್ಲಿ ವಂಚನೆ

ಉಡುಪಿ: ಪಾರ್ಟ್‌ಟೈಮ್ ಜಾಮ್‌ನಲ್ಲಿ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಮೋಸ ಮಾಡಿ ರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಕಳದ ಯತಿರಾಜ್ ಎಂಬವರಿಗೆ ಟೆಲಿಗ್ರಾಂ ಆ್ಯಪ್‌ನಲ್ಲಿ ಪಾರ್ಟ್ ಟೈಮ್ ಜಾಬ್ ಬಗ್ಗೆ ಸಂದೇಶ ಬಂದಿದ್ದು, ಇವರು ಹೆಚ್ಚಿನ ಲಾಭಾಂಶ ಪಡೆಯ ಬಹುದೆಂದು ಆಸೆ ತೋರಿಸಿ, ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಡಿ.7ರಿಂದ ಜ.9ರ ಮಧ್ಯಾವಧಿಯಲ್ಲಿ ಹಂತ ಹಂತವಾಗಿ ಒಟ್ಟು 43,43,596ರೂ. ಹಣವನ್ನು ಪಾವತಿಸಿದ್ದರು. ಆದರೆ ಯತಿರಾಜ್‌ಗೆ ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನು ನೀಡದೇ ನಂಬಿಸಿ ಮೋಸ ಮಾಡಿರುವುದಾಗಿ ದೂರಲಾಗಿದೆ.
Next Story





