Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ಬೀಚ್ ಅಭಿವೃದ್ಧಿಗೆ ಮಾಸ್ಟರ್...

ಮಲ್ಪೆ ಬೀಚ್ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್: ಜಿಲ್ಲಾಧಿಕಾರಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ25 Jan 2024 7:14 PM IST
share
ಮಲ್ಪೆ ಬೀಚ್ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್: ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಸ್ವಿಮ್ಮಿಂಗ್, ಪಾರ್ಕಿಂಗ್, ಫುಡ್ ಕೋರ್ಟ್, ವಾಟರ್ ಸ್ಪೋರ್ಟ್ಸ್, ಪಾರ್ಕಿಂಗ್ ಪ್ರದೇಶ ಸೇರಿ ದಂತೆ ಎಲ್ಲವನ್ನು ವ್ಯವಸ್ಥಿತವಾಗಿ ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು, ಈ ಕುರಿತು ನಿರ್ಮಿತಿ ಕೇಂದ್ರ ಹಾಗೂ ಮಣಿಪಾಲ ಎಂಐಟಿಯವರು ಜಂಟಿಯಾಗಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ಬೀಚ್‌ನಲ್ಲಿ ಎಲ್ಲವೂ ಅವ್ಯ ವಸ್ಥೆ ರೀತಿಯಲ್ಲಿದ್ದು, ಅವುಗಳನ್ನು ಪ್ರತ್ಯೇಕವಾಗಿ ವ್ಯವಸ್ಥಿತಗೊಳಿಸಲಾಗುವುದು. ಈ ನಿಟ್ಟಿನಲ್ಲಿ ನಿರ್ಮಿತಿ ಕೇಂದ್ರ ಹಾಗೂ ಮಣಿಪಾಲ ಎಂಐಟಿಯವರು ಸ್ಥಳ ಪರಿಶೀಲನೆ ನಡೆಸಿ ಯೋಜನೆ ಸಿದ್ಧಪಡಿಸುತ್ತಿದ್ದಾರೆ. ಇದರ ನಂತರ ಮುಂದೆ ಬೀಚ್ ಪಾರ್ಕಿಂಗ್ ಮತ್ತು ಕಸ ವಿಲೇವಾರಿಗಾಗಿ ಹೊಸ ಟೆಂಡರ್ ಕರೆಯಲಾಗುವುದು ಎಂದರು.

ಇಂದ್ರಾಳಿ ರೈಲ್ವೇ ಸೇತುವೆಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಗರ್ಡರ್ ಕಾಮಗಾರಿ ಪೂರ್ಣಗೊಂಡಿದ್ದು, ಲಕ್ನೋದಲ್ಲಿರುವ ರೈಲ್ವೇ ಸುರಕ್ಷತಾ ಆಯುಕ್ತಾಲಯ ತಂಡ ಆಗಮಿಸಿ ಇದರನ್ನು ಪರೀಕ್ಷೆ ಮಾಡಿದೆ. ಮುಂದೆ ಗರ್ಡರ್‌ನ್ನು ಇಂದ್ರಾಳಿಗೆ ತಂದು ಅಳವಡಿಸಬೇಕು. ಅದಕ್ಕೆ ಒಂದು ತಿಂಗಳ ಅವಧಿ ಬೇಕಾಗುತ್ತದೆ. ಆದುದರಿಂದ ಮುಂದಿನ ಮಾರ್ಚ್ ಒಳಗೆ ಸೇತುವೆ ಕಾಮಗಾರಿ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ನಮ್ಮ ಇಂಜಿನಿಯರ್ ಕೂಡ ಹುಬ್ಬಳ್ಳಿಗೆ ತೆರಳಿ ಗರ್ಡರ್ ಕಾಮಗಾರಿ ನೋಡಿಕೊಂಡು ಬಂದಿದ್ದಾರೆ ಎಂದು ಅವರು ಹೇಳಿದರು.

ವಾರಾಹಿಯಿಂದ ಉಡುಪಿ ನಗರಸಭೆ ನೀರು ಪೂರೈಕೆ ಮಾಡುವ ಸಂಬಂಧ ದಾರಿ ಮಧ್ಯೆ ಅರಣ್ಯ ಇಲಾಖೆಯ ಸಮಸ್ಯೆ ಇದ್ದು, ಆ ಸಂಬಂಧ ಅರ್ಜಿಯನ್ನು ಹಾಕಲಾಗಿದೆ. ಅದೇ ರೀತಿ ಸ್ವರ್ಣ ನದಿಯಲ್ಲಿ ಪೈಪ್‌ಲೈನ್‌ಗಾಗಿ ನಿರ್ಮಿಸ ಲಾಗುತ್ತಿರುವ ಸೇತುವೆ ಕಾಮಗಾರಿ ಪೂರ್ಣಗೊಂಡಿಲ್ಲ. ಇದೀಗ ಅಲ್ಲಿರುವ ಲೋಕೋಪಯೋಗಿ ಇಲಾಖೆಯ ಸೇತುವೆಯಲ್ಲಿ ತಾತ್ಕಾಲಿಕ ವಾಗಿ ಪೈಪ್‌ಲೈನ್ ಮಾಡಲು ಅನುಮತಿ ನೀಡಲಾಗಿದೆ. ಸೇತುವೆ ಕಾಮಗಾರಿಯು ಮುಂದಿನ ಆರು ತಿಂಗಳ ಒಳಗೆ ಪೂರ್ಣಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದರು.

ವೈಜ್ಞಾನಿಕವಾಗಿ ದರ ಏರಿಕೆ: ಉಡುಪಿ ನಗರಸಭೆಯಲ್ಲಿ ಕುಡಿಯುವ ನೀರಿನ ದರ ಉಳಿದ ನಗರಸಭೆಗಳಿಂತ ಏರಿಕೆ ಮಾಡಿಲ್ಲ. ಉಳಿದ ನಗರಸಭೆ ಹಾಗೂ ಕಾರ್ಕಳ ಪುರಸಭೆಗೆ ಹೋಲಿಕೆ ಮಾಡಿದರೆ ನಮ್ಮ ದರ ತೀರಾ ಕಡಿಮೆ ಇತ್ತು. ಅದನ್ನೆಲ್ಲ ಪರಿಶೀಲನೆ ಮಾಡಿಯೇ ವೈಜ್ಞಾನಿಕವಾಗಿ ದರ ಏರಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರತಿ ವ್ಯಕ್ತಿ ದಿನಕ್ಕೆ 135ಲೀಟರ್ ನೀರು ಬಳಕೆ ಮಾಡಬಹುದು. ಆ ಮಿತಿಯ ಅಂದಾಜಿನಲ್ಲಿ 11ಸಾವಿರ ಲೀಟರ್‌ವರೆಗೆ ಕನಿಷ್ಠ ದರವನ್ನು ನಿಗದಿಪಡಿಸಲಾಗಿದೆ. ಈ ಮಿತಿಗಿಂತ ಜಾಸ್ತಿ ಬಳಕೆ ಮಾಡುತ್ತಾರೆಯೋ ಅವರಿಗೆ ಮಾತ್ರ ಹೆಚ್ಚಿನ ದರ ಅನ್ವಯವಾಗುತ್ತದೆ. ಉಳಿದಂತೆ ಶೇ.80ರಷ್ಟು ಮಂದಿಗೆ ಯಾವುದೇ ಪರಿಣಾಮ ಆಗುವುದಿಲ್ಲ. ನೀರಿನ ಮಿತ ಬಳಕೆ ಮಾಡಬೇಕು ಮತ್ತು ನಿರ್ವಹಣೆಗೆ ಆದಾಯ ಕೂಡ ಬರಬೇಕೆಂಬ ಉದ್ದೇಶದಿಂದ ದರ ಏರಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.

ಉಡುಪಿ ಜಿಲ್ಲಾಸ್ಪತ್ರೆ ನೂತನ ಕಟ್ಟಡ ಮುಂದಿನ ಆಗಸ್ಟ್‌ನಲ್ಲಿ ಪೂರ್ಣ ಗೊಳ್ಳಲಿದೆ. ಜಲಜೀವನ್ ಯೋಜನೆಯಡಿ ಬೈಂದೂರು ಮತ್ತು ಕಾರ್ಕಳದಲ್ಲಿ ನೀರಿನ ಮೂಲಗಳನ್ನು ಗುರುತಿಸಲಾಗಿದೆ. ಮಾರ್ಚ್‌ನಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಎಲ್ಲರು ನೀರಿನ ಮಿತ ಬಳಕೆ ಮಾಡಿ ಕೊಳ್ಳಬೇಕು. ರೈತರು ತಮ್ಮ ಬೋರ್‌ವೆಲ್‌ಗೆ ರೈನ್ ವಾಟರ್ ಆರ್ವೆಸ್ಟಿಂಗ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ನೀರಿನ ಸಮಸ್ಯೆ: 76 ಬೋರ್‌ವೆಲ್ ಗುರುತು

ಸದ್ಯಕ್ಕೆ ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಅಥವಾ ಕೊರತೆ ಕಂಡು ಬಂದಿಲ್ಲ. ಈ ಸಂಬಂಧ ಪ್ರತಿ ವಾರ ಪರಿಶೀಲನೆ ನಡೆಸುವಂತೆ ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದ್ದೇವೆ. ಈ ಹಿಂದೆ ನೀರಿನ ಸಮಸ್ಯೆ ಕಂಡುಬಂದ ಪ್ರದೇಶ ಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪಿಡಿಓಗಳು 76 ಬೋರ್‌ವೆಲ್‌ಗಳನ್ನು ಗುರುತಿಸಿ ಸಿದ್ಧಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ತಿಳಿಸಿದರು.

ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾದರೆ ಈ ಬೋರ್‌ವೆಲ್‌ಗೆ ಪೈಪ್‌ಲೈನ್ ಮಾಡಿ ನೀರು ಪೂರೈಕೆ ಮಾಡಿಕೊಡಲಾಗುವುದು. ಅದೇ ರೀತಿ ಟ್ಯಾಂಕರ್ ಮೂಲಕ ನೀರು ಕೊಡಲು ಈಗಾಗಲೇ ಟೆಂಡರ್ ಅಂತಿಮ ಮಾಡಲಾಗಿದೆ. ಉಡುಪಿ ನಗರದಲ್ಲಿ ಸದ್ಯ ನೀರಿನ ಸಮಸ್ಯೆ ಇಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X