Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮತದಾನ ಇಡೀ ದೇಶದ ಭವಿಷ್ಯ ರೂಪಿಸುವ ಪ್ರಥಮ...

ಮತದಾನ ಇಡೀ ದೇಶದ ಭವಿಷ್ಯ ರೂಪಿಸುವ ಪ್ರಥಮ ಹೆಜ್ಜೆ: ನ್ಯಾ.ಅಬ್ದುಲ್ ರಹೀಮ್

ಕುಂದಾಪುರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ25 Jan 2024 8:39 PM IST
share
ಮತದಾನ ಇಡೀ ದೇಶದ ಭವಿಷ್ಯ ರೂಪಿಸುವ ಪ್ರಥಮ ಹೆಜ್ಜೆ: ನ್ಯಾ.ಅಬ್ದುಲ್ ರಹೀಮ್

ಕುಂದಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮತದಾನ ಇಡೀ ದೇಶದ ಭವಿಷ್ಯ ರೂಪಿಸುವ ಪ್ರಥಮ ಹೆಜ್ಜೆಯಾಗಿದೆ. ಮತದಾನದ ಹಕ್ಕು ಪಡೆದವರು ದೇಶ, ರಾಜ್ಯದ ಪ್ರಗತಿ ಬಗ್ಗೆ ಸೂಕ್ಷ್ಮವಾಗಿ ವಿಚಾರ ಮಾಡಿ ಜಾಗಾರುಕತೆಯಿಂದ ಮತದಾನ ಮಾಡಬೇಕು. ಈ ಮೂಲಕವಾಗಿ ಸ್ವಸ್ಥ ದೇಶ ಕಟ್ಟುವಲ್ಲಿ ಪ್ರತಿಯೊಬ್ಬ ನಾಗರಿಕ ಮುಂದಾಗಬೇಕು ಎಂದು ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಖ್ ಹೇಳಿದ್ದಾರೆ.

ಕುಂದಾಪುರ ತಾಲೂಕು ಆಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಗ ಇಲಾಖೆ ಕುಂದಾಪುರದ ಸಹಯೋಗದೊಂದಿಗೆ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜು ಶ್ರೀಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಓಟು ಬುಲೇಟ್ಗಿಂತ ಶಕ್ತಿಶಾಲಿ ಎಂಬ ಮಾತಿದೆ. 18 ವರ್ಷ ತುಂಬಿದ ಪ್ರತಿಯೋರ್ವ ದೇಶದ ಪ್ರಗತಿಯನ್ನು ಮುಂದಿಟ್ಟು ಕೊಂಡು ಯಾವುದೇ ರಾಜಕೀಯ ಪಕ್ಷದ ಆಮಿಷಕ್ಕೆ ಒಳಗಾಗದೇ ಪವಿತ್ರವಾದ ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿ ಕೊಳ್ಳಬೇಕು. ಪ್ರಜಾಪ್ರಭುತ್ವ ತನ್ನ ನೈಜ್ಯ ಮೌಲ್ಯ ಕಳೆದುಕೊಳ್ಳುತ್ತಿರುವ ಕಾಲಘಟ್ಟದಲ್ಲಿ ಮತದಾರರ ದಿನಾಚರಣೆ ಯಂತಹ ಕಾರ್ಯಕ್ರಮ ಅಗತ್ಯವಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ರಾಜು ಎನ್. ಮಾತನಾಡಿ, ಭಾರತ ದಲ್ಲಿ ಸಂಸದೀಯ ಮಾದರಿ ಪ್ರಜಾಪ್ರಭುತ್ವ ಜಗತ್ತಿನಅತೀ ದೊಡ್ಡ ಪ್ರಜಾಪ್ರಭುತ್ವ ಸರಕಾರ ಹೊಂದಿದೆ. ಜಾತಿ, ಪಂಥ, ಜನಾಂಗೀಯ ಅಧಾರದ ಮೇಲೆ ಚಲಾಯಿಸದೆ ಯೋಗ್ಯ ಮತ ಚಲಾಯಿಸುವ ಮೂಲಕ ಬದ್ದತೆ ತೋರಬೇಕು. ಯುವ ಮತದಾರರು ಮಹತ್ತರ ಜವಬ್ದಾರಿ ಹೊಂದಿದ್ದನ್ನು ಅರಿತು ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ೩ ಸಾವಿರಕ್ಕೂ ಹೆಚ್ಚು ಯುವ ಮತದಾರರು ಹೆಸರು ನೋಂದಣಿ ಮಾಡಿಕೊಂಡು ಮುಂಬರುವ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ ಎಂದರು.

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ಹಾಗೂ ಮತದಾರರ ನೋಂದಣಾಧಿಕಾರಿ ರಶ್ಮಿ ಎಸ್.ಆರ್. ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಶೃತಿಶ್ರೀ ಎಸ್., ಕುಂದಾಪುರ ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ, ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಜಿ.ರಾಮಕೃಷ್ಣ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಶ್ರೀನಾಥ ರಾವ್, ಕುಂದಾಪುರದ ಸಹಾಯಕ ಸರಕಾರಿ ಅಭಿಯೋಜಕ ಉದಯ್ ಕುಮಾರ್ ಬಿ.ಎ. ಮೊದಲಾದವರು ಉಪಸ್ಥಿತರಿದ್ದರು.

ಬಸ್ರೂರು ಶಾರದಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ವಿಶ್ವನಾಥ ಅಚಾರ್ಯ ಉಪನ್ಯಾಸ ನೀಡಿದರು. ವಿದ್ಯಾರ್ಥಿ ಗಳಿಂದ ’ಮತ ಮಾರಾಟಕ್ಕಲ್ಲ’ ಕಿರು ನಾಟಕ ಪ್ರದರ್ಶನಗೊಂಡಿತು. ಕುಂದಾಪುರ ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್. ಸ್ವಾಗತಿಸಿದರು. ಪೂರ್ಣಿಮಾ ಗಾಂವ್ಕರ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X