Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿವೇಚನೆಯ ಮತದಾನದಿಂದ ಸ್ವಸ್ಥ ಸಮಾಜ...

ವಿವೇಚನೆಯ ಮತದಾನದಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ: ನ್ಯಾ.ಶಾಂತವೀರ ಶಿವಪ್ಪ

ವಾರ್ತಾಭಾರತಿವಾರ್ತಾಭಾರತಿ25 Jan 2024 9:11 PM IST
share
ವಿವೇಚನೆಯ ಮತದಾನದಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ: ನ್ಯಾ.ಶಾಂತವೀರ ಶಿವಪ್ಪ

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಆಯ್ಕೆಗೆ ಮತದಾರರಿಗೆ ಅವಕಾಶವಿದ್ದು, ಮತದಾರರು ವಿವೇಚನೆಯಿಂದ ಯಾವುದೇ ಆಮೀಷಗಳಿಗೆ ಒಳಗಾಗದೇ ಮತ ಚಲಾಯಿಸಿ, ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದರೊಂದಿಗೆ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪಹೇಳಿದ್ದಾರೆ.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಇಂದು ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸಾಂವಿಧಾನಿಕವಾಗಿ ನೀಡಿರುವ ಮತ ದಾನದ ಹಕ್ಕನ್ನು ಜವಾಬ್ದಾರಿ ಎಂದು ಅರಿತು ಮತದಾನ ಮಾಡಬೇಕು ಹಾಗೂ ಸಂವಿಧಾನದಲ್ಲಿ ತಿಳಿಸಿರುವಂತೆ ಹಕ್ಕು ಮತ್ತು ಕರ್ತವ್ಯಗಳ ಅನುಸರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಇದನ್ನು ತಪ್ಪದೇ ಪಾಲಿಸಬೇಕು ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಮಾತನಾಡಿ, ಯುವ ಮತದಾರರು ಯೋಚಿಸಿ, ಮತದಾನ ಮಾಡಿದ್ದಲ್ಲಿ ಬದ ಲಾವಣೆ ಸಾಧ್ಯ. ಪ್ರತಿಯೊಬ್ಬ ನಾಗರಿಕರು ಮತದಾನ ಮಾಡುವುದು ಕರ್ತವ್ಯವೆಂದು ಅರಿತು ಮತದಾನ ಮಾಡಬೇಕು. ಆಗ ಮಾತ್ರ ಸದೃಢ ಪ್ರಜಾಪ್ರಭುತ್ವ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಂಡ ಯುವ ಮತದಾ ರರಿಗೆ ಮತದಾರರ ಗುರುತಿನ ಚೀಟಿಯನ್ನು ಹಾಗೂ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ವಹಿಸಿದ್ದರು. ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ರಾಷ್ಟ್ರೀಯ ಮತದಾ ರರ ದಿನಾಚರಣೆಯ ಅಂಗವಾಗಿ ಜಿಲ್ಲಾ ವತಿಯಿಂದ ನೇಮಿಸಲಾದ ರಾಯಭಾರಿಗಳಾದ ರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಶೆಟ್ಟಿ, ಕಲಾವಿದೆ ಮಾನಸಿ ಸುಧೀರ್, ರಂಗಭೂಮಿ ನಟಿ ಆರ್.ಜೆ.ಕಾಜಲ್, ಕ್ರಿಕೇಟ್ ಆಟಗಾರ ಪೃಥ್ವಿರಾಜ್ ಶೆಟ್ಟಿ ಹುಂಚಣಿ ಮೊದಲಾದವರು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಜಾಥಾವು ಸರ್ವೀಸ್ ಬಸ್ ನಿಲ್ದಾಣದಿಂದ ಪ್ರಾರಂಭಿಸಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪುರಭವನವನ್ನು ತಲುಪಿತು.

ಜಾಥಾದಲ್ಲಿ ಕಲಾತಂಡಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗಿದರು.

ಶೇ.100ರಷ್ಟು ಮತದಾನದ ವಾಗ್ದಾನ: ಡಿಸಿ

ಉಡುಪಿ ಜಿಲ್ಲೆಯ ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾನ ಪ್ರಕ್ರಿಯೆ ಯಲ್ಲಿ ಭಾಗವಹಿಸುವಂತೆ ಮಾಡಿ ಶೇ.100ರಷ್ಟು ಮತದಾನ ಮಾಡುವ ವಾಗ್ದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಘೋಷಿಸಿ ದರು.

ಚುನಾವಣೆ ಒಂದು ಪ್ರಜಾಪ್ರಭುತ್ವ ದೇಶದಲ್ಲಿ ಅತೀ ಮುಖ್ಯವಾದುದು. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ತಳವೂರಲು ಚುನಾವಣೆ ಅತ್ಯಗತ್ಯ. ಅರ್ಥಪೂರ್ಣವಾದ ಪಾರದರ್ಶಕ ಸರಕಾರ ಜಾರಿಗೆ ತರುವ ಜವಾಬ್ದಾರಿ ನಮ್ಮ ಕೈಯಲ್ಲಿದ್ದು, ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬ ಮತದಾರರು ಅರ್ಹ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X