ಕೆಮ್ತೂರು ತುಳು ನಾಟಕ ಸ್ಪರ್ಧೆಯ ಬಹುಮಾನ ವಿತರಣೆ

ಉಡುಪಿ, ಜ.28: ಉಡುಪಿ ತುಳುಕೂಟದ ವತಿಯಿಂದ 22ನೇ ವರ್ಷದ ಕೆಮ್ತೂರು ದೊಡ್ಡಣ್ಷ ಶೆಟ್ಟಿ ನೆನಪಿನ ತುಳು ನಾಟಕ ಹಬ್ಬದ ಬಹುಮಾನ ವಿತರಣಾ ಸಮಾರಂಭವನ್ನು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರವಿವಾರ ಆಯೋಜಿಸಲಾಗಿತ್ತು
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೋ.ಲಕ್ಷ್ಮೀನಾರಾಯಣ ಕಾರಂತ ಮುಖ್ಯ ಅತಿಥಿಗಳಾಗಿದ್ದರು.
ಈ ಸಂದರ್ಭದಲ್ಲಿ ಹಿರಿಯ ರಂಗ ಕಲಾವಿದ ದಯಾನಂದ ಶೆಟ್ಟಿ ಹೇರೂರು ಅವರಿಗೆ ‘ತುಳು ಕಲಾರತ್ನ’ ಬಿರುದು ಪ್ರದಾನ ಮಾಡಲಾಯಿತು. ವೇದಿಕೆಯಲ್ಲಿ ತುಳುಕೂಟ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಕೋಶಾಧಿಕಾರಿ ಚೈತನ್ಯ ಎಂ.ಜಿ., ಕೆಮ್ತೂರು ಕುಟುಂಬದ ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ತೀರ್ಪುಗಾರರ ಪರವಾಗಿ ಕಾತ್ಯಾಯಿನಿ ಕುಂಜಿಬೆಟ್ಟು ಅನಿಸಿಕೆ ವ್ಯಕ್ತ ಪಡಿಸಿದರು. ನಾಟಕ ಸ್ಪರ್ಧೆಯ ಸಂಚಾಲಕ ಪ್ರಭಾಕರ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರತ್ನಾಕರ ಇಂದ್ರಾಳಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪ್ರಥಮ ಪ್ರಶಸ್ತಿ ಪಡೆದ ’ಮರಣ ಗೆಂದಿನಾಯೆ’ ನಾಟಕ ಮರು ಪ್ರದರ್ಶನ ಗೊಂಡಿತು.





