Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ಬಂದರಿನ ಎಲ್ಲಾ ಸಮಸ್ಯೆಗಳ ಶೀಘ್ರ...

ಮಲ್ಪೆ ಬಂದರಿನ ಎಲ್ಲಾ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಪ್ರಯತ್ನ: ಮೀನುಗಾರರಿಗೆ ಮಂಕಾಳ ವೈದ್ಯರ ಭರವಸೆ

ಮೀನುಗಾರಿಕಾ ಸಚಿವರಿಂದ ಮಲ್ಪೆ ಬಂದರಿಗೆ ಪ್ರಥಮ ಭೇಟಿ

ವಾರ್ತಾಭಾರತಿವಾರ್ತಾಭಾರತಿ5 Feb 2024 8:04 PM IST
share
ಮಲ್ಪೆ ಬಂದರಿನ ಎಲ್ಲಾ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಪ್ರಯತ್ನ: ಮೀನುಗಾರರಿಗೆ ಮಂಕಾಳ ವೈದ್ಯರ ಭರವಸೆ

ಮಲ್ಪೆ: ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಅವರು ಸಚಿವರಾಗಿ ಅಧಿ ಕಾರ ಸ್ವೀಕರಿಸಿದ ಬಳಿಕ ಇಂದು ಮಲ್ಪೆ ಮೀನುಗಾರಿಕೆ ಬಂದರಿಗೆ ಪ್ರಥಮ ಬಾರಿಗೆ ಭೇಟಿ ನೀಡಿ ಸ್ಥಳೀಯ ಮೀನುಗಾರರು, ಮಹಿಳಾ ಮೀನುಗಾರರು ಹಾಗೂ ಮೀನುಗಾರರ ಸಂಘದ ಪದಾಧಿಕಾರಿಗಳೊಂದಿಗೆ ವ್ಯಾಪಕ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಪೆ ಬಂದರನ್ನು ಅವಲೋಕಿಸಿದಾಗ ಬಂದರಿನಲ್ಲಿ ಬೋಟ್ ಎಳೆಯಲು, ಬಂದರಿನಲ್ಲಿ ನಿಲ್ಲಿಸಲು, ಹಾಗೂ ಹಿಡಿದ ಮೀನುಗಳನ್ನು ಒಣಗಿಸಲು ಸಮಸ್ಯೆ ಇರುವುದು ಗೊತ್ತಾ ಗಿದೆ. ಈ ಸಮಸ್ಯೆಗಳ ಪರಿಹಾರಕ್ಕಾಗಿ ನೀಲನಕ್ಷೆಯನ್ನು ತಯಾರಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಇಲ್ಲಿನ ಎಲ್ಲಾ ಸಮಸ್ಯೆ ಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದರು.

2017-18ನೇ ಸಾಲಿನಿಂದ ಮೀನುಗಾರಿಕೆ ಮತ್ತು ಬಂದರು ಇಲಾಖೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಸುಮಾರು 1800 ಕೋಟಿ ರೂ.ಗಳಷ್ಟು ಅನುದಾನ ಖರ್ಚಾಗದೇ ಉಳಿದುಕೊಂಡಿದೆ. ಇಲಾಖೆಯ ಮೂಲಕ ವಿವಿಧ ಕಾಮಗಾರಿಗಾಗಿ ಈ ಅನುದಾನ ಬಿಡುಗಡೆಯಾಗಿದ್ದು, ಸಿಆರ್‌ಝಡ್ ಕಾಯ್ದೆ ಯ ತಾಂತ್ರಿಕ ಸಮಸ್ಯೆಗಳಿಂದಾಗಿ ಕಾಮಗಾರಿ ನಡೆಸಲು ಸಾಧ್ಯ ವಾಗಿಲ್ಲ ಎಂದು ಅವರು ತಿಳಿಸಿದರು.

ಇದೀಗ ರಾಜ್ಯ ಸರಕಾರ ಕರಾವಳಿಯ ಮೂರು ಜಿಲ್ಲೆಗಳ ವ್ಯಾಪ್ತಿಯ ಒಟ್ಟು 320ಕಿ.ಮೀ. ಉದ್ದದ ಕಡಲ ತೀರದ ಸಿಆರ್‌ಝಡ್ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಮವನ್ನು ಕೈಗೊಂಡಿದ್ದು, ಇದಕ್ಕೆ ಕೇಂದ್ರದಿಂದ ಅನುಮೋದನೆ ದೊರೆತ ತಕ್ಷಣ ಸಮಸ್ಯೆ ಬಗೆಹರಿದು ಇಲಾಖೆಯ ಕಾಮಗಾರಿಗಳನ್ನು ನಡೆಸಲಾಗುವುದು ಎಂದರು.

ಬಂದರಿನಲ್ಲಿ ಬಹುಕಾಲದಿಂದ ಹೂಳು ತುಂಬಿದ್ದು, ಬೋಟುಗಳ ಸರಾಗ ಸಂಚಾರಕ್ಕೆ ತಡೆ ಉಂಟಾಗುತ್ತಿದೆ. ಈಗಾಗಲೇ 3 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತುವ ಡ್ರೆಜ್ಜಿಂಗ್ ಕಾಮಗಾರಿ ನಡೆಯುತ್ತಿದೆ. ಮಲ್ಪೆ ಬಂದರಿನಲ್ಲಿ ಶೇ.70ರಷ್ಟು ಡ್ರೆಜ್ಜಿಂಗ್ ಮುಗಿದಿದೆ. ಬೋಟುಗಳ ಸುಗಮ ಸಂಚಾರಕ್ಕೆ ಬಂದರಿನಲ್ಲಿ ವರ್ಷಪೂರ್ತಿ ಹೂಳು ಎತ್ತಬೇಕೆಂಬ ಬೇಡಿಕೆ ಇದೆ. ಸರಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಅಂದರೆ ಪಿ.ಪಿ.ಪಿ ಮಾಡೆಲ್‌ನಲ್ಲಿ ಡ್ರೆಜ್ಜಿಂಗ್ ಯಂತ್ರವನ್ನು ಖರೀದಿಸುವ ಚಿಂತನೆ ನಡೆದಿದೆ ಎಂದರು.

ಮಲ್ಪೆ ಬಂದರಿನಲ್ಲಿ ಈಗಿರುವ ಎಲ್ಲಾ ಬೋಟುಗಳ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಇದ್ದು, ಇದನ್ನು ವಿಸ್ತರಿಸಲು ಮೀನುಗಾರರ ಬೇಡಿಕೆ ಇದೆ. ಸ್ಥಳೀಯ ಮೀನುಗಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕಾರ್ಯೋನ್ಮುಖ ರಾಗುತ್ತೇವೆ ಎಂದು ಸಚಿವ ಮಂಕಾಳ ಎಸ್.ವೈದ್ಯ ತಿಳಿಸಿದರು.

ಬಹು ಸಮಯದಿಂದ ಮೀನುಗಾರರಿಂದ ಸೀ-ಆಂಬುಲೆನ್ಸ್ ವ್ಯವಸ್ಥೆಗೆ ವ್ಯಾಪಕ ಬೇಡಿಕೆ ಇದೆ. ಈ ಬಾರಿಯ ಬಜೆಟ್‌ನಲ್ಲಿ ಅನುದಾನ ನೀಡುವ ನಿರೀಕ್ಷೆ ಇದೆ. ಮೀನುಗಾರರಿಗೆ ಹಾಗೂ ಮೀನುಗಾರ ಮಹಿಳೆಯರಿಗೆ ಅನುಕೂಲವಾಗುವಂತೆ ಬಂದರಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯದ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ತೆಗೆದುಕೊಳ್ಳುವಂತೆ ಸೂಚಿಸುವುದಾಗಿ ಹೇಳಿದರು.

ನಮ್ಮ ಸಿದ್ಧರಾಮಯ್ಯ ನೇತೃತ್ವದ ಸರಕಾರ ಮೀನುಗಾರರ ಪರವಾಗಿದ್ದು ಮೀನುಗಾರಿಕೆಗೆ ಪೂರಕವಾಗುವಂತಹ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲು, ಅಭಿವೃದ್ಧಿಗಳನ್ನು ಹಾಗೂ ಯೋಜನೆಗಳನ್ನು ಮಾಡಲು ಬದ್ದವಾಗಿದೆ ಎಂದು ವೈದ್ಯ, ಮೀನುಗಾರಿಕೆ ಎಂಬುದು ಅತ್ಯಂತ ಸವಾಲಿನ ವೃತ್ತಿ ಎಂಬುದು ಅದೇ ಸಮಾಜದಿಂದ ಬಂದಿರುವ ನನಗೆ ತಿಳಿಸಿದಿದೆ. ಹೀಗಾಗಿ ಮೀನುಗಾರರ ಎಲ್ಲಾ ಕಷ್ಟಗಳನ್ನು, ಸಮಸ್ಯೆಗಳನ್ನು ಅರಿತಿರುವ ನಾನು ಅವರಿಗೆ ಅನುಕೂಲ ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಅವರು ಮೀನುಗಾರರಿಗೆ ಹಾಗೂ ಮಹಿಳೆಯರಿಗೆ ಆಶ್ವಾಸನೆ ನೀಡಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X