ಬ್ರಹ್ಮಾವರ: ಅರತಕ್ಷತೆ ಸಮಾರಂಭದಲ್ಲಿ ಬ್ಯಾಗ್ ಕಳವು

ಬ್ರಹ್ಮಾವರ, ಫೆ.5: ಮದುವೆ ಅರತಕ್ಷತೆಯಲ್ಲಿ ಲಕ್ಷಾಂತರ ರೂ. ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವಾಗಿರುವ ಘಟನೆ ಫೆ.4ರಂದು ರಾತ್ರಿ 9ಗಂಟೆ ಸುಮಾರಿಗೆ ಬ್ರಹ್ಮಾವರದಲ್ಲಿ ನಡೆದಿದೆ.
ನೀಲಾವರದ ಜಯಶ್ರೀ ಸುರೇಶ್ ಎಂಬವರ ಮಗಳು ಸಮೀಕ್ಷಾಳ ಮದುವೆ ಆರತಕ್ಷತೆ ಸಮಾರಂಭ ಬ್ರಹ್ಮಾವರ ಶ್ಯಾಮಿಲಿ ಶನಾಯ ಹಾಲ್‌ನಲ್ಲಿ ನಡೆದಿದ್ದು, ಈ ವೇಳೆ ಜಯಶ್ರೀ ತನ್ನ ಕೈಯಲ್ಲಿದ್ದ ಬ್ಯಾಗನ್ನು ಹಾಲ್ ಸ್ಟೇಜ್‌ನ ಕುರ್ಚಿಯ ಮೇಲೆ ಇಟ್ಟು ಮಗಳೊಂದಿಗೆ ಫೋಟೋ ತೆಗೆಸಿದ್ದರು. ಬಳಿಕ ಬಂದು ನೋಡಿದಾಗ ಬ್ಯಾಗ್ ಕಳವಾಗಿರುವುದು ಕಂಡುಬಂತು. ಬ್ಯಾಗ್‌ನಲ್ಲಿ 2,40,000 ರೂ. ಮೌಲ್ಯದ ನಗದು ಹಾಗೂ ವಸ್ತುಗಳಿದ್ದವು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





