ಸೈಕಲ್‌ನಿಂದ ಬಿದ್ದು ಸವಾರ ಮೃತ್ಯು

ಬೈಂದೂರು, ಫೆ.7: ಸೈಕಲ್‌ನಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ.6ರಂದು ರಾತ್ರಿ ವೇಳೆ ಅರೆಕಲ್ಲು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಮೃತರನ್ನು ಬಿಜೂರು ಗ್ರಾಮದ ಶೇಷು(53) ಎಂದು ಗುರುತಿಸಲಾಗಿದೆ. ಇವರು ಬಿಜೂರು ಪೇಟೆಯಿಂದ ಮನೆ ಕಡೆಗೆ ಸೈಕಲ್‌ನಲ್ಲಿ ಬರುತ್ತಿರುವಾಗ ಆರೋಗ್ಯದಲ್ಲಿ ಏರುಪೇರಾಗಿ ಸೈಕಲ್‌ನಿಂದ ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





