ಕೂರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಕೂರಾಡಿ ಸೀತಾರಾಮ ಅಡಿಗ
ಉಡುಪಿ, ಫೆ.8: ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕೂರಾಡಿ ಸೀತಾರಾಮ ಅಡಿಗರ ನೆನಪಿನ ‘ಕೂರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆಯು 2023ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಆಹ್ವಾನಿಸಿದೆ.
ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ, ಬುಡ್ನಾರ್ ರಸ್ತೆ, ಕುಂಜಿಬೆಟ್ಟು ಉಡುಪಿ. ಕವನ ಸಂಕಲನಗಳ ಪ್ರತಿಗಳನ್ನು ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 20 ಆಗಿದೆ.
ಪ್ರಶಸ್ತಿಯು 10,000 ರೂ.ನಗದಿನೊಂದಿಗೆ ಪ್ರಶಸ್ತಿಪತ್ರ ಹಾಗೂ ಫಲಕವನ್ನು ಒಳಗೊಂಡಿರುತ್ತದೆ ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ತಿಳಿಸಿದ್ದಾರೆ. ಕೃತಿಗಳು ಸ್ವರಚಿತ, ಸ್ವತಂತ್ರ ಕವನ ಸಂಕಲನಗಳಾಗಿರಬೇಕು. ಅನುವಾದ, ರೂಪಾಂತರ, ಶಿಶುಪ್ರಾಸ, ಹನಿಗವನ ಇತ್ಯಾದಿ ಕೃತಿಗಳನ್ನು ಸ್ಪರ್ಧಗೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ.(ಮೊ:9845240309) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.







