Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂವಿಧಾನ ವಿರೋಧಿ ವರ್ತನೆ ತೋರಿದ ಆರೋಪ:...

ಸಂವಿಧಾನ ವಿರೋಧಿ ವರ್ತನೆ ತೋರಿದ ಆರೋಪ: ಉಪ್ಪುಂದ ಗ್ರಾಪಂ ಅಧ್ಯಕ್ಷರ ವಜಾಕ್ಕೆ ಆಗ್ರಹಿಸಿ ದಸಂಸ ಧರಣಿ

ವಾರ್ತಾಭಾರತಿವಾರ್ತಾಭಾರತಿ9 Feb 2024 5:26 PM IST
share
ಸಂವಿಧಾನ ವಿರೋಧಿ ವರ್ತನೆ ತೋರಿದ ಆರೋಪ: ಉಪ್ಪುಂದ ಗ್ರಾಪಂ ಅಧ್ಯಕ್ಷರ ವಜಾಕ್ಕೆ ಆಗ್ರಹಿಸಿ ದಸಂಸ ಧರಣಿ

ಕುಂದಾಪುರ: ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಜಾತಿವಾದಿ ಮನಸ್ಥಿತಿ ನಿವಾರಣೆಯಾಗದಿರುವುದು ಸಮಾಜಕ್ಕೆ ಕಳಂಕ. ಸಂವಿಧಾನಬದ್ಧ ವ್ಯವಸ್ಥೆಯಡಿ ಆಯ್ಕೆಯಾದ ಜನಪ್ರತಿನಿಧಿಗಳು ಜನ ಹಾಗೂ ದೀನದಲಿತರ ಪರ ವಾಗಿ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿ ಧೋರಣೆ ಸರಿಯಲ್ಲ ಎಂದು ದಲಿತ ದೌರ್ಜನ್ಯ ಜಾಗೃತಿ ಸಮಿತಿ ಉಡುಪಿ ಜಿಲ್ಲಾ ಸದಸ್ಯ ವಾಸುದೇವ ಮುದೂರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಜಿಲ್ಲಾ ಸಮಿತಿ ಉಡುಪಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಸಮಿತಿ ಬೈಂದೂರು, ಡಾ. ಬಿ.ಆರ್.ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ಮತ್ತು ದಲಿತ ಸಂಘರ್ಷ ಸಮಿತಿ ಮಹಿಳಾ ಘಟಕ ತಾಲೂಕು ಸಮಿತಿ ಬೈಂದೂರು, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಗ್ರಾಮ ಸಮಿತಿ ಉಪ್ಪುಂದ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ವಿರೋಧಿ ಉಪ್ಪುಂದ ಗ್ರಾಪಂ ಅಧ್ಯಕ್ಷರನ್ನು ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಗ್ರಾಪಂ ಎದುರು ಶುಕ್ರವಾರ ಹಮ್ಮಿಕೊಂಡ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಜನರಲ್ಲಿ ಸಂವಿಧಾನದ ಆಶಯ, ಹಕ್ಕೊತ್ತಾಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸರಕಾರದ ಆದೇಶದಂತೆ ಸಂವಿ ಧಾನ ಜಾಗೃತಿ ಜಾಥಾ ಹಮ್ಮಿ ಕೊಳ್ಳಲಾಗಿತ್ತು. ಆದರೆ ಡಾ.ಬಿ.ಆರ್.ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನದಡಿ ಗೆದ್ದು ಬಂದು ಗ್ರಾಪಂ ಅಧ್ಯಕ್ಷರಾಗಿರುವ ಉಪ್ಪುಂದ ಗ್ರಾಪಂ ಪ್ರಥಮ ಪ್ರಜೆ ಕಾಲಿಗೆ ಚಪ್ಪಲಿ ಧರಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಅಗೌರವ ತೋರಿದ್ದಾರೆ. ಹೀಗೆಯೇ ಬೇರೆ ಬೇರೆ ವಿಚಾರದಲ್ಲಿ, ಆಡಳಿತಾತ್ಮಕ ವ್ಯವಸ್ಥೆಯಲ್ಲಿ ದುರ್ವ ರ್ತನೆ ತೋರುವ ಇವರ ದುರಾಡಳಿತದ ಸೊಕ್ಕನ್ನು ಮುರಿಯಲು ದಸಂಸ ಸಿದ್ಧವಿದೆ. ಮೊದಲು ಮನಸ್ಥಿತಿ ಸರಿಪಡಿಸಿಕೊಳ್ಳಿ ಇಲ್ಲವಾದರೆ ಕುರ್ಚಿ ಬಿಡಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನಮನೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ಪ್ರಭುಗಳಾಗಬೇಕು. ಆದರೆ ಕೊಳಕು ರಾಜಕೀಯದ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡುವ ಪ್ರವೃತ್ತಿಗಳು ಅಪಾಯಕಾರಿಯಾಗಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನ ಕೇವಲ ದಲಿತರಿಗೆ ಮಾತ್ರ ಸಂವಿಧಾನ ನೀಡಿಲ್ಲ. ಇಡೀ ದೇಶ, ವಿಶ್ವ ಮೆಚ್ಚುವ ಸಂವಿಧಾನ ನೀಡಿದ್ದಾರೆ. ಅಂಬೇಡ್ಕರ್ ವಿಚಾರಧಾರೆ ಬಂದಾಗ ಜಾತಿ ಎಳೆದು ತರುವ ಕೀಳು ಮನಸ್ಥಿತಿ ನಿಲ್ಲಬೇಕು. ಇಂತಹ ವರ್ತನೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು ಎಂದರು.

ಸ್ಥಳಕ್ಕೆ ಆಗಮಿಸಿದ ಬೈಂದೂರು ತಾಪಂ ಕಾರ್ಯನಿರ್ವಹಣಾಧಿಕಾರಿ ಭಾರತಿ ಹಾಗೂ ಉಪತಹಶಿಲ್ದಾರ್ ಲತಾ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ದಸಂಸ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು, ಹಿರಿಯ ದಲಿತ ಮುಖಂಡ ಮುಡೂರ ಮಾಸ್ಟರ್ ಅಂಬಾಗಿಲು, ಮಹಿಳಾ ಒಕ್ಕೂಟದ ಸಂಚಾಲಕಿ ಗೀತಾ ಸುರೇಶ್, ದಸಂಸ ಜಿಲ್ಲಾ ಸಮಿತಿ ಸದಸ್ಯ ಮಂಜುನಾಥ ನಾಗೂರು, ಕುಂದಾಪುರ ತಾಲೂಕು ಸಮಿತಿಯ ಸುರೇಶ್ ಹಕ್ಲಾಡಿ, ಬೈಂದೂರು ತಾಲೂಕು ಸಮಿತಿ ಪ್ರಧಾನ ಸಂಚಾಲಕ ನಾಗರಾಜ ಉಪ್ಪುಂದ, ಸಂಘಟನಾ ಸಂಚಾಲಕ ಗೋವಿಂದ ಹಳಗೇರಿ, ಸತೀಶ್ ಯಡ್ತರೆ, ಕೋಶಾಧಿಕಾರಿ ಕೆ.ಭಾಸ್ಕರ್ ಕೆರ್ಗಾಲು, ಜ್ಯೋತಿಬಾಪುಲೆ ಅಂಬೇಡ್ಕರ್ ಸಂಘದ ಅಧ್ಯಕ್ಷೆ ನಾಗಮ್ಮ, ದಸಂಸ ಮುಖಂಡರಾದ ರಾಮ ಮಯ್ಯಾಡಿ, ಸದಾನಂದ ಮೋವಾಡಿ, ರಾಘವೇಂದ್ರ ಶಿರೂರು, ಮಾಧವ ಬಾಕಾಡ, ಸುಂದರ ಬಾಬು ಹೊಸ್ಕೋಟೆ, ಶಿವರಾಜ ಬೈಂದೂರು, ಲಕ್ಷ್ಮಣ ಬೈಂದೂರು, ಶಿವರಾಮ ಹಳಗೇರಿ, ರಮೇಶ ನಾಡ, ರಂಗ ಯಡ್ತರೆ, ರಾಮ ಉಪ್ಪುಂದ, ಸಂದೀಪ ಮರವಂತೆ, ವಿನಯಾ ಮಾಸ್ತಿಕಟ್ಟೆ, ಭಾರತಿ ಶಿರೂರು, ನಾಗರತ್ನಾ ಭಾಸ್ಕರ್ ಮೊದಲಾದವರು ಉಪಸ್ಥಿತರಿದ್ದರು.

"ಸಂವಿಧಾನಕ್ಕೆ ಬೆಲೆ ಕೊಡದವರು, ಸಂವಿಧಾನಾತ್ಮಕ ಆಡಳಿತ ದಿಕ್ಕರಿಸುವವರು, ಡಾ.ಬಿ.ಆರ್.ಅಂಬೇಡ್ಕರ್‌ಗೆ ಅಗೌರವ ತೋರುವವರು ದೇಶದ್ರೋಹಿಗಳು. ಇಂತಹ ದೇಶದ್ರೋಹಿ ಗ್ರಾಪಂ ಅಧ್ಯಕ್ಷರಾಗಲು ನಾಲಾಯಕ್. ಸರ್ವಾಧಿಕಾರಿ ಧೋರ ಣೆಯ ಇಂತಹ ಅಧ್ಯಕ್ಷರು ಕೂಡಲೇ ರಾಜಿನಾಮೆ ನೀಡಬೇಕು".

-ರಾಜು ಬೆಟ್ಟಿನಮನೆ, ಸಂಚಾಲಕರು, ದಸಂಸ ಕುಂದಾಪುರ ತಾಲೂಕು ಸಮಿತಿ





share
ವಾರ್ತಾಭಾರತಿ
ವಾರ್ತಾಭಾರತಿ
Next Story
X