Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೇ ತಿಂಗಳಲ್ಲಿ ನೂತನ ಉಡುಪಿ...

ಮೇ ತಿಂಗಳಲ್ಲಿ ನೂತನ ಉಡುಪಿ ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧ: ಸಚಿವ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ10 Feb 2024 9:12 PM IST
share
ಮೇ ತಿಂಗಳಲ್ಲಿ ನೂತನ ಉಡುಪಿ ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧ: ಸಚಿವ ಗುಂಡೂರಾವ್

ಉಡುಪಿ, ಫೆ.10: ಅಜ್ಜರಕಾಡಿನಲ್ಲಿ ನಿರ್ಮಾಣಗೊಳ್ಳುತ್ತಿರುವ 250 ಹಾಸಿಗೆಗಳ ಸುಸಜ್ಜಿತ, ವಿಶಾಲ ಉಡುಪಿ ಜಿಲ್ಲಾಸ್ಪತ್ರೆ ಕಟ್ಟಡ ಮುಂದಿನ ಮೇ ತಿಂಗಳ ವೇಳೆ ಉದ್ಘಾಟನೆಗೆ ಸಿದ್ಧಗೊಳ್ಳಲಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಗೆ ಇದೇ ಮೊದಲ ಬಾರಿ ಭೇಟಿ ನೀಡಿ ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಚಿವರು ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿ ಮಾಹಿತಿಗಳನ್ನು ಪಡೆದುಕೊಂಡರು.

ಜಿಲ್ಲೆಯಾಗಿ 25 ವರ್ಷ ಪೂರ್ಣಗೊಂಡರೂ 120 ಹಾಸಿಗೆಗಳ ತಾಲೂಕು ಆಸ್ಪತ್ರೆಯೇ ಇದ್ದು, ಇದೀಗ ಪಕ್ಕದಲ್ಲೇ 250 ಹಾಸಿಗೆಗಳ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಈಗಾಗಲೇ ಶೇ.70ರಷ್ಟು ಕಾಮಗಾರಿ ಮುಗಿದಿದ್ದು, ಇದಕ್ಕೆ ಜಿಲ್ಲಾಸ್ಪತ್ರೆಗೆ ಅಗತ್ಯವಿರುವಷ್ಟು ಸಿಬ್ಬಂದಿಗಳು, ವೈದ್ಯರ ನೇಮಕಾತಿ ನಡೆಯಬೇಕಿದೆ ಎಂದು ಜಿಲ್ಲಾ ಸರ್ಜನ್ ಡಾ.ವೀಣಾ ಕುಮಾರಿ ಹಾಗೂ ಡಾ.ವಾಸುದೇವ್ ಸಚಿವರಿಗೆ ವಿವರಿಸಿದರು.

ಅಲ್ಲದೇ ಹೊಸ ಆಸ್ಪತ್ರೆಗೆ ಅಗತ್ಯವಿರುವ ಉಪಕರಣಗಳು, ಒಳಾಂಗಣ ಹಾಗೂ ಇತರ ಸೌಲಭ್ಯಗಳಿಗೆ ಅನುದಾನದ ಅಗತ್ಯವಿದ್ದು, ಇದರೊಂದಿಗೆ ವೈದ್ಯರು, ತಜ್ಞರು, ನಾನ್ ಮೆಡಿಕಲ್ ಸಿಬ್ಬಂದಿಗಳ ನೇಮಕಾತಿಯೂ ಆಗಬೇಕಿರುವ ಕಡೆಗೆ ಅವರು ಸಚಿವರ ಗಮನ ಸೆಳೆದರು. ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಡಯಾಲಿಸಿಸ್ ಘಟಕ ಉದ್ಘಾಟನೆ: ಇದೇ ವೇಳೆ ಆರೋಗ್ಯ ಸಚಿವರು ಜಿಲ್ಲಾಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್ ಘಟಕ ಗಳನ್ನು ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್‌ಪಾಲ್ ಎ ಸುವರ್ಣ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ.ರಂದೀಪ, ಆರೋಗ್ಯ ಇಲಾಖೆಯ ನಿರ್ದೇಶಕಿ ಪುಷ್ಪಲತಾ ಬಿ. ಎಸ್, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ, ಜಿಲ್ಲಾ ಸರ್ಜನ್ ಡಾ. ವೀಣಾಕುಮಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್ ಮತ್ತಿತರರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X