Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿವಶರಣೆಯರ ವಚನ ಸಾಹಿತ್ಯಗಳಿಂದ ಸಮಾಜ...

ಶಿವಶರಣೆಯರ ವಚನ ಸಾಹಿತ್ಯಗಳಿಂದ ಸಮಾಜ ಸುಧಾರಣೆ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ12 Feb 2024 7:25 PM IST
share
ಶಿವಶರಣೆಯರ ವಚನ ಸಾಹಿತ್ಯಗಳಿಂದ ಸಮಾಜ ಸುಧಾರಣೆ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: 12ನೇ ಶತಮಾನದಲ್ಲಿ ಶಿವಶರಣೆಯರು ರಚಿಸಿದ ವಚನ ಸಾಹಿತ್ಯಗಳು ವಿಚಾರ ಕ್ರಾಂತಿಯನ್ನು ಮೂಡಿಸುವುದ ರೊಂದಿಗೆ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಕಾಯಕ ಶರಣರ ಜಯಂತಿ ಆಚರಣೆ ಕಾರ್ಯಕ್ರಮ ದಲ್ಲಿ ಮಾದರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಾದರ ಧೂಳಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ಕರ್ನಾಟಕದ ಇತಿಹಾಸದಲ್ಲಿ 12ನೇ ಶತಮಾನ ಮಹತ್ವಪೂರ್ಣವಾದ ಕಾಲಘಟ್ಟ. ಈ ಕಾಲಘಟ್ಟದಲ್ಲಿ ಕಾಯಕ ನಿಷ್ಠೆಯ ಮೂಲಕ ಗುರುತಿಸಿಕೊಂಡ ಪ್ರತಿಯೊಬ್ಬ ಶರಣರು ವಿಶಿಷ್ಟವಾದ ಜೀವನ ನಡೆಸಿದ್ದಾರೆ. ಪ್ರಾಮಾಣಿಕ ಕೆಲಸಕ್ಕೆ ಗೌರವ ದೊರಕುತ್ತದೆ ಎಂಬುದನ್ನು ಇವರುಗಳಿಂದ ತಿಳಿಯ ಬಹುದಾಗಿದೆ. ವೈಚಾರಿಕ ಜ್ಞಾನವನ್ನು ಹೊಂದಿದ್ದ ಇವರುಗಳು ಮಾತು ಮತ್ತು ಕೃತಿಗೆ ವ್ಯತ್ಯಾಸ ಇಲ್ಲದಂತೆ ಸರಳ ಜೀವನ ನಡೆಸಿರುವುದು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದರು.

ಶಿವಶರಣೆಯರು ಜಾತಿ, ಮತ, ಪಂಥದ ಬೇಧವಿಲ್ಲದೇ ಸಮ ಸಮಾಜದ ಕನಸನ್ನು ಕಂಡು ಅದರಂತೆ ಬದುಕಿ ತೋರಿಸಿ ದ್ದಾರೆ. ಅವರುಗಳ ಆದರ್ಶಗಳು ಇಂದಿಗೂ ದಾರಿದೀಪವಾಗಿದ್ದು, ಅವುಗಳನ್ನು ಪಾಲಿಸುವುದರೊಂದಿಗೆ ವಚನಕಾರರ ತತ್ವಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವ ಕೆಲಸವಾಗಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪನ್ಯಾಸ ನೀಡಿ, ಬಸವಣ್ಣನವರ ಪ್ರಭಾವದಿಂದ 12ನೇ ಶತಮಾನದಲ್ಲಿ ಸಾಮಾಜಿಕ ಹಾಗೂ ಧಾರ್ಮಿಕ ಕ್ರಾಂತಿಯಾಯಿತು. ಪ್ರತಿಯೊಬ್ಬರೂ ಜೀವನ ನಿರ್ವಹಣೆಗೆ ಶ್ರಮವಹಿಸಿ ದುಡಿಯುವುದರೊಂದಿಗೆ ವೃತ್ತಿಧರ್ಮಕ್ಕೆ ಮೋಸ ಮಾಡಬಾರದೆನ್ನುವುದು ವಚನಕಾರರ ಮುಖ್ಯ ಆಶಯ. ಅತ್ಯಂತ ಹಿಂದುಳಿದ ವರ್ಗದಲ್ಲಿ ಹುಟ್ಟಿದ ಕಾಯಕ ಶರಣರು ತಮ್ಮ ಕಾಯಕ ನಿಷ್ಠೆಯಿಂದಲೇ ಸಮಾಜದಲ್ಲಿ ಗುರುತಿಸಿಕೊಂಡು, ಸಾಮರಸ್ಯದ ಜೀವನ ಸಾಗಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕಲಾವಿದ ವಾಸುದೇವ ಬನ್ನಂಜೆ, ಕಸಾಪ ಕಾರ್ಯ ದರ್ಶಿ ನರಸಿಂಹ ಮೂರ್ತಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ ದರು, ಕನ್ನಡ ಉಪನ್ಯಾಸಕ ರಾಮಾಂಜಿ ನಿರೂಪಿಸಿ, ಕೋಶಾಧಿಕಾರಿ ಮನೋಹರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X