ಮಂದಾರ್ತಿ ಜಾತ್ರೆ: ಮದ್ಯ ಮಾರಾಟ ನಿಷೇಧ

ಉಡುಪಿ : ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆ.15ರವರೆಗೆ ನಡೆಯಲಿರುವ ಹಿನ್ನೆಲೆ ಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಸ್ಥಾನದ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಫೆ.13ರ ಸಂಜೆ 6ಗಂಟೆಯಿಂದ ಫೆ.15ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಷ ಹೊರಡಿಸಿದ್ದಾರೆ.
Next Story





