ಮಲ್ಪೆ: ಸುಟ್ಟಗಾಯಗಳಿಂದ ಮಹಿಳೆ ಸಾವು

ಮಲ್ಪೆ: ಮನೆಯ ವಠಾರದಲ್ಲಿದ್ದ ಕಸದ ರಾಶಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚುವ ವೇಳೆ ಬಟ್ಟೆಗೆ ಆಕಸ್ಮಿಕವಾಗಿ ಬೆಂಕಿ ತಲುಗಿ ಸುಟ್ಟಗಾಯಕ್ಕೊಳಗಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಮೃತರನ್ನು ಕೊಡವೂರು ಗ್ರಾಮದ ಸಾರಾ ದೇವದಾಸ (63) ಎಂದು ಗುರುತಿಸಲಾಗಿದೆ. ಫೆ.13ರ ಸಂಜೆ 4:30ರ ಸುಮಾರಿಗೆ ಸಾರಾ ದೇವದಾಸ ಅವರು ಮನೆಯ ವಠಾರದ ಕಸದ ರಾಶಿಗೆ ಬೆಂಕಿ ಹಚ್ಚುವುದಕ್ಕೆ ಮುಂದಾಗಿದ್ದರು. ಈ ವೇಳೆ ಕಸಕ್ಕೆ ಸೀಮೆಎಣ್ಣೆ ಸುರಿದಿದ್ದು, ಅವರು ಧರಿಸಿದ್ದ ನೈಟಿಗೆ ಸೀಮೆಎಣ್ಣೆ ತಗಲಿತ್ತು.
ಕಸಕ್ಕೆ ಬೆಂಕಿ ಹಚ್ಚಿದಾಗ ಸಾರಾ ದೇವದಾಸ ಅವರ ನೈಟಿಗೆ ಬೆಂಕಿ ತಾಗಿ ದೇಹ ಸಂಪೂರ್ಣ ಸುಟ್ಟು ಹೋಗಿತ್ತು. ಆ ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11:20ರ ಸುಮಾರಿಗೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





