Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೃತಕ ಬುದ್ಧಿಮತ್ತೆಯನ್ನು ಆರೋಗ್ಯ,...

ಕೃತಕ ಬುದ್ಧಿಮತ್ತೆಯನ್ನು ಆರೋಗ್ಯ, ಶಿಕ್ಷಣದಲ್ಲಿ ಎಚ್ಚರಿಕೆಯಿಂದ ಬಳಸಿದರೆ ಹಲವು ಉತ್ತಮ ಸಾಧ್ಯತೆಗಳಿವೆ: ಪ್ರೊ.ಕೆ.ಪಿ.ರಾವ್

‘ಡಿಕೋಡಿಂಗ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್’ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ15 Feb 2024 7:30 PM IST
share
ಕೃತಕ ಬುದ್ಧಿಮತ್ತೆಯನ್ನು ಆರೋಗ್ಯ, ಶಿಕ್ಷಣದಲ್ಲಿ ಎಚ್ಚರಿಕೆಯಿಂದ ಬಳಸಿದರೆ ಹಲವು ಉತ್ತಮ ಸಾಧ್ಯತೆಗಳಿವೆ: ಪ್ರೊ.ಕೆ.ಪಿ.ರಾವ್

ಉಡುಪಿ: ಕೃತಕ ಬುದ್ಧಿಮತ್ತೆ(ಎಐ)ಯನ್ನು ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಬಳಸಿದರೆ ಮಾನವನಿಗೆ ಪೂರಕವಾದ ಹಲವು ಸಾಧ್ಯತೆಗಳನ್ನು ಸಾಧಿಸಬಹುದಾಗಿದೆ ಎಂದು ಖ್ಯಾತ ಗಣಕ ಭಾಷಾ ಶಾಸ್ತ್ರಜ್ಞ ಮತ್ತು ವಿದ್ವಾಂಸ ಪ್ರೊ.ಕೆ.ಪಿ.ರಾವ್ ಹೇಳಿದ್ದಾರೆ.

ಮಣಿಪಾಲದ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸಾಯನ್ಸ್‌ನ ಆಶ್ರಯದಲ್ಲಿ ನಡೆದ ‘ಡಿಕೋಡಿಂಗ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್’ ವಿಷಯದ ಕುರಿತ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು ಸಂಗೀತ, ಕಥನ ಕಲೆ, ವೀಡಿಯೊ ಎಡಿಟಿಂಗ್ ಮತ್ತು ಮಾಧ್ಯಮದಂತಹ ಸೃಜನಶೀಲ ಕ್ಷೇತ್ರಗಳಲ್ಲಿ ಎಐನಿಂದ ಬಹು ಉಪಯೋಗಗಳನ್ನು ಹೊಂದಬಹುದು ಎಂದು ಹೇಳಿದರು.

ಆದಾಗಿಯೂ, ಕೃತಕ ಬುದ್ಧಿಮತ್ತೆಯು ಅಂತಿಮವಾಗಿ ಮಾನವನ ಬುದ್ಧಿವಂತಿಕೆಯ ಮೇಲೆ ಅವಲಂಬಿತವಾಗಿರುತ್ತದೆ ಎಂದ ಅವರು, ಎಐನ್ನು ಮಾನವ ಸ್ನೇಹಿಯಾಗಿ ರೂಪಿಸುವ ಸವಾಲು ಮಾನವನ ಮುಂದಿದೆ ಎಂದು ಅಭಿಪ್ರಾಯಪಟ್ಟರು.

ಮಾನವನ ಕೆಲಸಗಳಿಗೆ ಸಹಕಾರಿಯಾಗಲು ಆತನ ಸಹಾಯಕನಂತೆ ಅದನ್ನು ಬಳಸಬಹುದು. ತಾಂತ್ರಿಕ ಪ್ರಗತಿಯನ್ನು ನಿಲ್ಲಿಸಲು ಸಾಧ್ಯವಿಲ್ಲ, ಆದ್ದರಿಂದ ಅದನ್ನು ನಾವು ಎಚ್ಚರಿಕೆಯಿಂದ ಉಪಯೋಗಿಸಬೇಕು. ಇದನ್ನು ಮಾನವ ಕಲ್ಯಾಣ ಕ್ಕಾಗಿ, ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ನಾವು ನೋಡಬೇಕಾ ಗಿದೆ ಎಂದರು.

ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಅವರು ದತ್ತಾಂಶ, ಮಾಹಿತಿ ಮತ್ತು ಕೃತಕ ಬುದ್ಧಿಮತ್ತೆಯ ಜ್ಞಾನವನ್ನು ನಿಭಾಯಿಸಲು ಅಗತ್ಯವಾದ ಬುದ್ಧಿವಂತಿಕೆಯ ಕುರಿತು ಮಾತನಾಡಿದರು.

ತನಿಷ್ಕಾ ಕೋಟ್ಯಾನ್ ಸಂವಾದವನ್ನು ನಿರ್ವಹಿಸಿದರು. ಡಾ.ರೇಸ್ಮಿ ಭಾಸ್ಕರನ್, ಥಾಮಸ್, ಡಾ.ಜನಾರ್ದನ್ ಹಾವಂಜೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X