ಕಾರು ಢಿಕ್ಕಿ; ಬುಲೆಟ್ ಸವಾರ ಮೃತ್ಯು

ಕೋಟ, ಫೆ.15: ಕಾರೊಂದು ಬುಲೆಟ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಭಂಡಾರ್ತಿ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಮಹೇಂದ್ರ ಎಂದು ಗುರುತಿಸಲಾಗಿದೆ. ಇವರು ಕೆಲಸ ಮುಗಿಸಿ ಬುಲೆಟ್‌ನಲ್ಲಿ ಸೈಬ್ರಕಟ್ಟೆ ಕಡೆಯಿಂದ ಶಿರೂರು ಮೂರುಕೈ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡ ಮಹೇಂದ್ರ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





