ಕುಂದಾಪುರ: ಸಾಂಸ್ಕೃತಿಕ ನಾಯಕ ಬಸವಣ್ಣರ ಭಾವಚಿತ್ರ ಅನಾವರಣ

ಕುಂದಾಪುರ: ರಾಜ್ಯ ಸರಕಾರದ ಆದೇಶದಂತೆ ಕುಂದಾಪುರ ತಾಲೂಕು ಆಡಳಿತ, ತಾಪಂ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗ ದಲ್ಲಿ ಕುಂದಾಪುರದ ಆಡಳಿತ ಸೌಧದ ಕೋರ್ಟ್ ಹಾಲ್‌ನಲ್ಲಿ ‘ಸಾಂಸ್ಕೃತಿಕ ನಾಯಕ’ ಬಸವಣ್ಣ ಅವರ ಭಾವಚಿತ್ರದ ಅನಾವರಣ ಶನಿವಾರ ನಡೆಯಿತು.
ಭಾವಚಿತ್ರವನ್ನು ಅನಾವರಣಗೊಳಿಸಿದ ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಎಚ್.ಎಸ್. ಮಾತನಾಡಿ, ಬಸವಣ್ಣನ ವರು ಅನೇಕ ವಚನಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ಅವರ ತತ್ವಗಳನ್ನು ನಾವೆಲ್ಲರೂ ಜೀವನ ದಲ್ಲಿ ಅನುಸರಿಸಬೇಕಿದೆ ಎಂದರು.
ಕುಂದಾಪುರ ತಾಪಂ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ರಾವ್, ಉಪ ತಹಶೀಲ್ದಾರ್‌ಗಳಾದ ಚಂದ್ರಶೇಖರ್, ಪ್ರಕಾಶ್ ಪೂಜಾರಿ, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಆರ್., ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿ, ಸಿಬಂದಿಗಳು ಉಪಸ್ಥಿತರಿದ್ದರು.
ಉಪ ತಹಶೀಲ್ದಾರ್ ವಿನಯ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Next Story





