Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳ ರಕ್ಷಣೆಯಲ್ಲಿ ನಾಗರಿಕರ ಪಾತ್ರ...

ಮಕ್ಕಳ ರಕ್ಷಣೆಯಲ್ಲಿ ನಾಗರಿಕರ ಪಾತ್ರ ಮಹತ್ವ: ನ್ಯಾ. ಶಾಂತವೀರ ಶಿವಪ್ಪ

ವಾರ್ತಾಭಾರತಿವಾರ್ತಾಭಾರತಿ17 Feb 2024 8:45 PM IST
share
ಮಕ್ಕಳ ರಕ್ಷಣೆಯಲ್ಲಿ ನಾಗರಿಕರ ಪಾತ್ರ ಮಹತ್ವ: ನ್ಯಾ. ಶಾಂತವೀರ ಶಿವಪ್ಪ

ಉಡುಪಿ, ಫೆ.17: ಮಕ್ಕಳ ರಕ್ಷಣೆಯಲ್ಲಿ ನಾಗರಿಕರ ಪಾತ್ರ ಮಹತ್ವ ವಾದುದು. ಸಾರ್ವಜನಿಕರು ನಾಗರಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಮಕ್ಕಳಿಂದ ಜರಗುವ ಅಪರಾಧವನ್ನು ತಡೆಗಟ್ಟುವ ಮೂಲಕ ಮುಂಬರುವ ದಿನಗಳಲ್ಲಿ ಮಕ್ಕಳಿಗೆ ಸುಸ್ಥಿರ ಸಮಾಜವನ್ನು ನಿರ್ಮಾಣಗೊಳಿಸಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದ್ದಾರೆ.

ಶನಿವಾರ ಬನ್ನಂಜೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ವಸತಿ ನಿಲಯದ ಮೇಲ್ವಿ ಚಾರಕರು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಬಾಲನ್ಯಾಯ ಕಾಯ್ದೆ 2015 ತಿದ್ದುಪಡಿ 2021, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ 2012, ಬಾಲ್ಯ ವಿವಾಹ ಕಾಯ್ದೆ ಹಾಗೂ ಬಾಲ ಕಾರ್ಮಿಕತೆ ಹಾಗೂ ಭಿಕ್ಷಾಟನೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಕ್ಕಳು ಅಪರಾಧ ಮಾಡುವ ಉದ್ದೇಶವನ್ನು ತಿಳಿಯುವುದರೊಂದಿಗೆ, ಅಪರಾಧ ಮಾಡುವಾಗ ಮಕ್ಕಳ ಮನಸ್ಥಿತಿಯನ್ನು ಅರಿತು ಮಕ್ಕಳೊಂದಿಗೆ ಯಾವ ರೀತಿಯಲ್ಲಿ ವರ್ತಿಸಬೇಕು ಎಂಬುದರ ಅರಿವು ಪೊಲೀಸರಿಗಿರಬೇಕು. ಪೊಲೀಸರು ಮಕ್ಕಳ ಕುರಿತಾದ ಕಾನೂನುಗಳು ಬದಲಾದಂತೆ ಕಾನೂನಿನ ತಿಳುವಳಿಕೆ ಪಡೆದುಕೊಳ್ಳಲು ಕಾರ್ಯಾಗಾರ ತರಬೇತಿ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬರು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಕಾನೂನಿನ ತಿದ್ದುಪಡಿ ಗಳು ಗಮನಕ್ಕೆ ಬಾರದೇ ಹೋದಾಗ ಕಾನೂನಿನ ಪುನರ್‌ಮನನಗೊಳಿಸಲು ಕಾರ್ಯಾಗಾರವು ಸಹಕಾರಿಯಾಗಲಿದ್ದು, ಅವುಗಳನ್ನು ತಿಳಿದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮಕ್ಕಳು ಸೂಕ್ಷ್ಮ ಮನೋಭಾವದವರಾಗಿದ್ದು ಸಮಾಜದಲ್ಲಿ ನಡೆಯುವ ಅಪಾಯಗಳ ಗಂಭೀರತೆಯ ಅರಿವು ಅವರಿಗೆ ಇರುವುದಿಲ್ಲ. ಹೀಗಾಗಿ ಶೀಘ್ರವಾಗಿ ಅನೇಕ ಸಮಸ್ಯೆಗಳಿಗೆ ಒಳಗಾಗುತ್ತಾರೆ, ಮಕ್ಕಳಿಗೆ ಸಂಬಂಧಪಟ್ಟ ಇಲಾಖೆಗಳು ಈ ಎಲ್ಲಾ ಅಂಶಗಳನ್ನು ಗಮನ ದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ, ಕರಾವಳಿ ಜಿಲ್ಲೆಗಳಲ್ಲಿ ಮಕ್ಕಳ ರಕ್ಷಣೆ ಕಾಯ್ದೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿರು ವುದು ಸಂತಸದ ವಿಚಾರವಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಡುಪಿ ಜಿಲ್ಲೆ ಮಾದರಿಯಾಗಲಿ ಎಂದು ಆಶಿಸಿದರು.

ಬಾಲ್ಯದಲ್ಲಿ ನಕರಾತ್ಮಕ ಅನುಭವಗಳನ್ನು ಅನುಭವಿಸಿ ಮಕ್ಕಳು ಯೌವನ ದಲ್ಲಿ ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ. ಮಕ್ಕಳಲ್ಲಿ ಉಂಟಾಗುವ ಅನೇಕ ಬದಲಾವಣೆಗಳಿಗೆ ನಾವು ಸ್ಪಂದಿಸಿದಾಗ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯವಾಗುತ್ತದೆ ಎಂದ ಡಾ.ತಿಪ್ಪೇಸ್ವಾಮಿ, ದೇಶದಲ್ಲಿ ಅನೇಕ ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸದೆ ಸಮಸ್ಯೆಗಳನ್ನು ಎದುರಿಸಿಕೊಂಡು ಬಂದಿದ್ದು ಅಂತಹ ಗುಂಪುಗಳನ್ನು ಗುರುತಿಸಿ ಸಮಾಜದಲ್ಲಿ ಅವರಿಗೆ ಉತ್ತಮ ಜೀವನ ವನ್ನು ಕಲ್ಪಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಎಸ್‌ಪಿ ಡಾ. ಸಿದ್ಧಲಿಂಗಪ್ಪ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ವಿಘ್ನೇಶ್ ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ದರ್ಶಿ ಶರ್ಮಿಳಾ ಎಸ್ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು ಪೊಲೀಸ್ ಮಹಾನಿರ್ದೇಶಕ ತರಬೇತಿ ಕಛೇರಿಯ ಪೊಲೀಸ್ ತರಬೇತುದಾರ ರೋಹಿತ್ ಮತ್ತು ಮೈಸೂರು ಪೊಲೀಸ್ ಆಯುಕ್ತರ ಕಚೇರಿಯ ಪೊಲೀಸ್ ತರಬೇತುದಾರ ಪ್ರಸನ್ನ ಕುಮಾರ್ ಜಿ.ಎಸ್ ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ಎಂ. ಸ್ವಾಗತಿಸಿ, ಪ್ರಕಾಶ್ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು. ಕಪಿಲಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X