Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ...

ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಬೈಬಲ್‌ಗಳ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ18 Feb 2024 6:27 PM IST
share
ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಬೈಬಲ್‌ಗಳ ಪ್ರದರ್ಶನ

ಉಡುಪಿ: ಸಂತ ಅನ್ನಮ್ಮ ದೇವಾಲಯ ತೊಟ್ಟಂ ಇದರ ಬೈಬಲ್, ಸುವಾರ್ತ ಪ್ರಸಾರ, ಸಾಮಾಜಿಕ ಸಂಪರ್ಕ ಸಾಧನ ಆಯೋಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೈಬಲ್‌ಗಳ ಪ್ರದರ್ಶನ ಇಂದು ರವಿವಾರ ಚರ್ಚ್ ಸಭಾಂಗಣದಲ್ಲಿ ನಡೆಯಿತು.

ಬೈಬಲ್ ಗ್ರಂಥವನ್ನು ವಿಶೇಷ ಗೌರವದೊಂದಿಗೆ ಸಭಾಂಗಣದ ಮಧ್ಯಭಾಗ ದಲ್ಲಿ ಇರಿಸಿ ಹಾರಾರ್ಪಣೆಗೈದು ಪ್ರದರ್ಶನದ ಆವರಣವನ್ನು ಪವಿತ್ರ ಜಲ ಪ್ರೋಕ್ಷಣೆ ಮಾಡುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

ಚರ್ಚಿನ ಧರ್ಮಗುರುಗಳಾದ ವಂ. ಡೆನಿಸ್ ಡೆಸಾ ಮಾತನಾಡಿ, ಕ್ರೈಸ್ತ ಸಮುದಾಯದ ಆಧ್ಯಾತ್ಮಿಕ ಜೀವನಕ್ಕೆ ಇರುವ ಏಕೈಕ ಜಿಪಿಎಸ್ ಅಂದರೆ ಅದು ಪವಿತ್ರ ಬೈಬಲ್ ಗ್ರಂಥ. ಜೀವನದಲ್ಲಿ ಎಡವಿದಾಗ, ನೋವಿನ ಸಂದರ್ಭದಲ್ಲಿ ಮಗದೊಮ್ಮೆ ದೇವರ ಬಳಿ ಬರಲು ಸುಲಭದ ದಾರಿಯೇ ಬೈಬಲ್ ಗ್ರಂಥ. ಬೈಬಲ್ ಪ್ರದರ್ಶನದಲ್ಲಿ ಚರ್ಚಿನ ಮಕ್ಕಳು ಮತ್ತು ಹಿರಿಯರಿಗೆ ಮನೋರಂಜನೆಯ ಮೂಲಕ ಶಿಕ್ಷಣ ನೀಡುವುದು ಉದ್ದೇಶವಾಗಿದೆ ಎಂದರು.

ನಮ್ಮ ಧರ್ಮದ ಪವಿತ್ರ ಗ್ರಂಥದ ಬಗ್ಗೆ ಜ್ಞಾನ ಪಡೆಯುವುದರೊಂದಿಗೆ ನಾವು ಇತರ ಧರ್ಮದ ಪವಿತ್ರ ಗ್ರಂಥಗಳನ್ನು ಕೂಡ ಓದುವ ಹವ್ಯಾಸ ಹೊಂದಿರಬೇಕು.ಇದರಿಂದ ನಾವು ಇತರ ಧರ್ಮವನ್ನು ಗೌರವಿಸಲು ಸಹಕಾರಿಯಾಗಲಿದೆ. ಪ್ರತಿಯೊಂದು ಧರ್ಮದ ಪವಿತ್ರ ಗ್ರಂಥಗಳ ಸಾರಾಂಶ ದೇವರನ್ನು ಪ್ರೀತಿಸು ಮತ್ತು ನಿನ್ನ ನೆರೆಹೊರೆಯವರನ್ನು ಕೂಡ ಪ್ರೀತಿಸಿ ಎನ್ನುವುದಾಗಿದೆ ಎಂದರು.

ಇದೇ ವೇಳೆ ಮಾತನಾಡಿದ ಚರ್ಚಿನ ತರಬೇತಿ ಗುರು ವಂ. ಸ್ಟೀಫನ್ ರೊಡ್ರಿಗಸ್ ಮಾತನಾಡಿ, ಈ ಪ್ರದರ್ಶನದಲ್ಲಿ ವಿವಿಧ ಭಾಷೆಗಳ ಮತ್ತು ದೇಶಗಳ ಸುಮಾರು 90 ಪವಿತ್ರ ಬೈಬಲ್ ಗ್ರಂಥಗಳನ್ನು ಇರಿಸಲಾಗಿದೆ. ಇದಲ್ಲದೆ ಬೈಬಲ್ ನಲ್ಲಿರುವ ವಿವಿಧ ಕಥೆಗಳನ್ನು ಆಧರಿಸಿ ಅದರ ಮಾದರಿಗಳ ರಚನೆ ಮಾಡಲಾಗಿದ್ದು ಪೋಸ್ಟರ್‌ಗಳ ಪ್ರದರ್ಶನ, ಕ್ವಿಜ್ ಕೂಡ ಆಯೋಜಿಸಲಾಗಿದೆ ಎಂದರು.

ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ, ಕಾರ್ಯದರ್ಶಿ, 20 ಆಯೋಗಗಳ ಸಂಯೋಜಕರು, ಸ್ಥಳೀಯ ಕಾನ್ವೆಂಟ್‌ನ ಧರ್ಮಭಗಿನಿಯರು, ಬೈಬಲ್, ಸುವಾರ್ತ ಪ್ರಸಾರ, ಸಾಮಾಜಿಕ ಸಂಪರ್ಕ ಸಾಧನ ಆಯೋಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X