ಮಾನವ ಕಳ್ಳತನ ಸಾಗಾಣಿಕೆ ತಡೆಗಟ್ಟಲು ಅಧಿಕಾರಿಗಳ ಕ್ರಮ ಅಗತ್ಯ: ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್.

ಉಡುಪಿ: ಮಾನವ ಕಳ್ಳತನ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಕೆಯಾಗಿದೆ. ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧ ಇದಾಗಿದ್ದು, ಇದನ್ನು ತಡೆಗಟ್ಟುವಲ್ಲಿ ಸೂಕ್ತ ಕಾನೂನಿನ ಕ್ರಮವನ್ನು ಅಧಿಕಾರಿ ಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರ್ಶುಳಾ ಎಸ್ ಹೇಳಿದರು.
ಸೋಮವಾರ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆಯ ಕ್ಷೇತ್ರ ಮಟ್ಟದ ವಿವಿಧ ಇಲಾಖೆಗಳ ಭಾಗೀದಾರರಿಗೆ ನಡೆದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದರು.
ದೇಶದಲ್ಲಿ ಇಂತಹ ಅಪರಾಧಗಳನ್ನು ತಡೆಗಟ್ಟಲು ಅತ್ಯುತ್ತಮ ಕಾನೂನು ವ್ಯವಸ್ಥೆಗಳು ಇದ್ದರೂ ಸಹ, ಕಾನೂನುಗಳ ಅರಿವು ಹಾಗೂ ಸಮನ್ವಯದ ಕೊರತೆಯಿಂದಾಗಿ ಮಾನವ ಕಳ್ಳ ಸಾಗಾಣಿಕೆಯು ಬೆಳೆಯುತ್ತಿದೆ. ಕಾನೂನು ಗಳನ್ನು ದುರುಪಯೋಗ ಪಡೆಸಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾನೂನು ಗಳ ಸದುಪಯೋಗ ಹಾಗೂ ಅವುಗಳನ್ನು ಬಳಸಿ ಕೊಳ್ಳುವ ಕುರಿತು ಅಧಿಕಾರಿ ಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ಅತ್ಯವಶ್ಯಕ ಎಂದರು.
ಸಮಾಜದಲ್ಲಿ ಯಾವುದೇ ಜಾತಿ, ವಯಸ್ಸು ಧರ್ಮ ಹಾಗೂ ಲಿಂಗ ಭೇದಗಳಿಲ್ಲದೆ ಪ್ರತಿಯೊಬ್ಬರು ಇಂತಹ ದೌರ್ಜನ್ಯಕ್ಕೆ ಒಳಗಾಗುವುದನ್ನು ನಾವು ಕಾಣಬಹುದಾಗಿದ್ದು, ನಾಗರಿಕರು ಕಾನೂನುಗಳ ಕುರಿತು ಸರಿಯಾದ ಜ್ಞಾನ ಹೊಂದಿದಾಗ ಮಾತ್ರ ಇಂಥ ಅಪರಾಧಗಳನ್ನು ತಡೆಗಟ್ಟಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಮಾನವ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದ್ದು, ಇದನ್ನು ತಡೆಗಟ್ಟುವಲ್ಲಿ ಪೊಲೀಸ್, ಕಾರ್ಮಿಕ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯಪ್ರವೃತ್ತರಾಗ ಬೇಕು. ಅಲ್ಲದೇ ಇಂಥ ಪ್ರಕರಣಗಳು ನಡೆಯದಂತೆ ಎಚ್ಚರವಹಿಸಬೇಕು ಎಂದರು.
ಜಿಲ್ಲಾ ವಕೀಲ ಹಾಗೂ ಉಪ ಕಾನೂನು ನೆರವು ಅಧಿರಕ್ಷಕ ಶ್ರೀನಿವಾಸ ಉಪಾಧ್ಯ ಬಿ., ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ ಹಾಗೂ ಐ.ಟಿ.ಪಿ.ಎ 1956 ಕಾಯ್ದೆಯ ಅನುಷ್ಠಾನ ಹಾಗೂ ನೇಟಿವ್ ಸಂಸ್ಥೆಯ ಮುಖ್ಯಸ್ಥ ಪ್ರೇಮಾನಂದ ಕಲ್ಮಾಡಿ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕ ತಡೆ ಕುರಿತು ಕ್ರಮಬದ್ದ ಕಾರ್ಯವಿಧಾನ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ ಸ್ವಾಗತಿಸಿ, ದೀಪಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.







