ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರ-ಕಲಾ ಕುಸುಮ ಪ್ರಶಸ್ತಿ ಪ್ರದಾನ

ಬ್ರಹ್ಮಾವರ, ಫೆ.20: ಸಮಕಾಲೀನ ಸಮಾಜದ ಸ್ಥಿತಿಗತಿಯಲ್ಲಿ ನಾವೆಲ್ಲ ಕಲಿತು-ಬೆರೆತು ಅನನ್ಯತೆಯನ್ನು ಸಾಧಿಸಬೇಕಾ ಗಿದೆ. ಮೌಲ್ಯಗಳು ಕಟ್ಟಾಜ್ಞೆ ಆಗುವುದಿಲ್ಲ. ಅದು ದಿನೇ ದಿನೇ ರೂಢಿಸಿಕೊಳ್ಳುವ ಪ್ರಕ್ರಿಯೆಯಾಗಿದ್ದು ನಾವುಗಳು ಸನ್ನಿವೇಶವನ್ನು ರೂಪಿಸಿಕೊಡುವ ಮಹತ್ತರ ಕೆಲಸ ಮಾಡಬೇಕಾಗಿದೆ. ಎಂದು ಕೆ.ಆರ್.ನಾಕ್, ಸೂಪರ್ ಗ್ರೇಡ್ ಇಲೆಕ್ಟ್ರಿಕಲ್ ಕಂಟ್ರಾಕ್ಟರ್ ಹಂಗಳೂರು ಅವರು ಹೇಳಿದ್ದಾರೆ
ಹಂಗಾರಕಟ್ಟೆ ಬಾಳ್ಕುದ್ರು ಅಭಿವೃದ್ಧಿ ಸಂಸ್ಥೆಯ 14ನೇ ವಾರ್ಷಿಕೋತ್ಸವದ ಅಂಗವಾಗಿ ಸಾಸ್ತಾನ ಗುಂಡ್ಮಿ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಮತ್ತು ಜೀವನ ಮೌಲ್ಯಗಳು ಎಂಬ ಮಾಹಿತಿ ಶಿಬಿರ ಹಾಗೂ ಸಂಸ್ಥೆ ನೀಡುವ ಕಲಾ ಕುಸುಮ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತಿದ್ದರು.
ಅಧ್ಯಕ್ಷತೆಯನ್ನು ವಹಿಸಿದ್ದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸತೀಶ್ ಐತಾಳ್ ಮಾತನಾಡಿ, ನಮ್ಮಲ್ಲಿ ಅಡಕ ವಾಗಿರುವ ಸೂಕ್ತ ಪ್ರತಿಭೆ ಅನಾವರಣ ಗೊಳ್ಳುವುದೇ ಅತೀ ಪ್ರಮುಖ ಘಟ್ಟವಾಗಿದ್ದು ನಮ್ಮ ದೈನಂದಿನ ಕ್ರಿಯೆಯಲ್ಲಿ ಅದನ್ನು ಅನುಷ್ಠಾನಗೊಳಿಸುವುದು ಗುರು-ಹಿರಿಯರಲ್ಲಿ ಗೌರವ, ಪ್ರೀತಿ ಮತ್ತು ಸ್ವಾಭಿಮಾನವನ್ನು ಪ್ರಕಟಿಸಬೇಕಾಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಬಾರ್ಕೂರಿನ ಉದ್ಯಮಿ ರಾಜಗೋಪಾಲ್ ನಂಬಿ ಯಾರ್, ಮಂದಾರ ಶೆಟ್ಟಿ ಮಾತಾಡಿದರು. ಈ ಸಂದರ್ಭದಲ್ಲಿ ಕಲಾ ಕುಸುಮ ಪ್ರಶಸ್ತಿ ವಿಜೇತ ಆವರ್ಸೆ ಶ್ರೀನಿವಾಸ ಮಡಿವಾಳ ಪ್ರದಾನ ಮಾಡಿದರು.
ಸಭೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಘವೇಂದ್ರ ಜಿ., ಶಾಲಾ ಮುಖ್ಯ ಶಿಕ್ಷಕ ಸತೀಶ್ ಐತಾಳ್, ಸಂಪನ್ಮೂಲ ವ್ಯಕ್ತಿ ಗಿರೀಶ್ ಅಚ್ಲಾಡಿ, ಸಂಸ್ಥೆಯ ಕಾರ್ಯ ದರ್ಶಿ ರಮೇಶ್ ವಕ್ವಾಡಿ, ಪೋಷಕ ಪರಿಷತ್ ಸದಸ್ಯ ಗಣೇಶ್ ಗಾಣಿಗ ಉಪಸ್ಥಿತರಿದ್ದರು.
ವರ್ಷ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕ, ಸತೀಶ್ ಐತಾಳ್ ಸ್ವಾಗತಿಸಿದರು. ರಮೇಶ್ ವಕ್ವಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು. ಸುಮಾರು 185 ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದರು.







